Advertisement

ಆಸಕ್ತಿಯ ಕ್ಷೇತ್ರದಲ್ಲೇ ಸಾಗಲು ಮಕ್ಕಳ ಪ್ರೋತ್ಸಾಹಿಸಿ

04:38 PM Nov 10, 2019 | Team Udayavani |

ಎನ್‌.ಆರ್‌.ಪುರ: ಮಕ್ಕಳಿಗೆ ಯಾವ ಕ್ಷೇತ್ರದಲ್ಲಿ ಆಸಕ್ತಿ ಇರುತ್ತದೋ ಅದೇ ಕ್ಷೇತ್ರದಲ್ಲಿ ಪ್ರೋತ್ಸಾಹಿಸುವ ಕೆಲಸವನ್ನು ಪೋಷಕರು ಹಾಗೂ ಶಿಕ್ಷಕರು ಮಾಡಬೇಕೆಂದು ಶಾಸಕ ಟಿ.ಡಿ.ರಾಜೇಗೌಡ ತಿಳಿಸಿದರು.

Advertisement

ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಶುಕ್ರವಾರ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವದ ಸಾಂಸ್ಕತಿಕ ಸ್ಪರ್ಧೆಗಳಿಗೆ ಚಾಲನೆ ನೀಡಿ ಮಾತನಾಡಿದರು.

ಹಿಂದೆ ಯಾವುದೇ ಕಸುಬು ಹಾಗೂ ಕಲೆ ಕೆಲವು ವರ್ಗಗಳಿಗೆ ಮಾತ್ರ ಸೀಮಿತವಾಗಿತ್ತು. ಆದರೆ ಪ್ರಸ್ತುತ ಇವೆಲ್ಲವೂ ಯಾವುದೇ ವರ್ಗಕ್ಕೂ ಮೀಸಲಾಗಿಲ್ಲ. ಯಾವುದೇ ಕ್ಷೇತ್ರದಲ್ಲಿ ಯಾರು ಬೇಕಾದರೂ ಸಹ ತೊಡಗಿಕೊಳ್ಳಲು ಮುಕ್ತ ಅವಕಾಶವಿದೆ. ವಿದ್ಯಾರ್ಥಿಗಳು ಇದನ್ನು ಸದುಪಯೋಗಪಡಿಸಿಕೊಳ್ಳಬೇಕೆಂದರು.

ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ಒಂದೊಂದು ಪ್ರತಿಭೆ ಇರುತ್ತದೆ. ಪ್ರತಿಭಾ ಕಾರಂಜಿ ಮಕ್ಕಳಲ್ಲಿರುವ ಸಾಂಸ್ಕತಿಕ ಪ್ರತಿಭೆ ಹೊರಹೊಮ್ಮಿಸಲು ಸಹಕಾರಿಯಾಗಿದೆ. ಶಿಕ್ಷಣ ಬೌದ್ಧಿಕ ಬೆಳವಣಿಗೆ ಹಾಗೂ ವ್ಯವಹಾರಿಕ ಜ್ಞಾನ ತಂದು ಕೊಡಲು ಸಹಕಾರಿಯಾದರೆ, ಕ್ರೀಡೆ ಆರೋಗ್ಯವನ್ನು ವೃದ್ಧಿಸಲು ಸಹಕಾರಿಯಾಗಿದೆ ಎಂದರು.

ಸಂಗೀತಕ್ಕೆ ಮಾನಸಿಕ ಒತ್ತಡವನ್ನು ತಡೆಗಟ್ಟಲು ಸಹಾಯಕವಾಗುತ್ತದೆ. ತಾಲೂಕಿನ ವ್ಯಾಪ್ತಿಯಲ್ಲಿ ಶಾಲೆಗಳ ಕಟ್ಟಡ ದುರಸ್ತಿಗೆ 75.50ಲಕ್ಷ ರೂ., ಶೋ ವಿತರಣೆಗೆ 18ಲಕ್ಷ ರೂ. ವಿನಿಯೋಗಿಸಲಾಗಿದೆ. 517 ವಿದ್ಯಾರ್ಥಿಗಳಿಗೆ ಸೈಕಲ್‌ ವಿತರಿಸಲಾಗಿದೆ. ತಮ್ಮ ಅಧಿಕಾರ ಅವಧಿ ಯೊಳಗೆ ಕ್ಷೇತ್ರದ ಎಲ್ಲಾ ಸರ್ಕಾರಿ ಶಾಲೆಗಳಲ್ಲೂ ಸ್ಮಾರ್ಟ್‌ ಕ್ಲಾಸ್‌ ಸೌಲಭ್ಯ ಒದಗಿಸಲಾಗುವುದು. ಕ್ಷೇತ್ರದ ಅಭಿವೃದ್ಧಿಗೆ ಬಿಡುಗಡೆಯಾಗಿ ಟೆಂಡರ್‌ ಆಗಿದ್ದ 103 ಕೋಟಿ ರೂ. ಅನುದಾನವನ್ನು ಸರ್ಕಾರ ತಡೆಹಿಡಿದಿದೆ. ಈ ಬಗ್ಗೆ ಮುಖ್ಯಮಂತ್ರಿಗಳ ಗಮನ ಸೆಳೆಯಲಾಗಿದ್ದು, ಡಿಸೆಂಬರ್‌ನಲ್ಲಿ ಬಿಡುಗಡೆ ಮಾಡುವ ಭರವಸೆ ನೀಡಿದ್ದಾರೆ.

Advertisement

ಇದು ಬಿಡುಗಡೆಯಾದರೆ ಅಭಿವೃದ್ಧಿ ಕಾಮಗಾರಿ ವೇಗ ಪಡೆದುಕೊಳ್ಳಲಿದೆ ಎಂದರು. ಪ್ರಾಸ್ತಾವಿಕವಾಗಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಪಿ.ನಾಗರಾಜ್‌, ಮಕ್ಕಳಲ್ಲಿ ಸುಪ್ತವಾಗಿರುವ ಪ್ರತಿಭೆಯನ್ನು ಹೊರಹೊಮ್ಮಿಸಲು ವೇದಿಕೆ ಕಲ್ಲಿಸುವುದು, ನಾಡಿನ ಕಲೆ, ಸಂಸ್ಕೃತಿಯನ್ನು ಜೀವಂತವಾಗಿಟ್ಟು ಮುಂದಿನ ತಲೆಮಾಡಿಗೆ ಕೊಂಡೊಯ್ಯುವುದು ಪ್ರತಿಭಾ ಕಾರಂಜಿಯ ಉದ್ದೇಶವಾಗಿದೆ ಎಂದರು.

ತಾಲೂಕು ಮಟ್ಟದಲ್ಲಿ 1ರಿಂದ 5, 6ರಿಂದ 7 ಹಾಗೂ 9ರಿಂದ 12 ಹೀಗೆ ಮೂರು ಹಂತದಲ್ಲಿ ಪ್ರತಿಭಾ ಕಾರಂಜಿ ನಡೆಯಲಿದೆ. 19 ವೈಯಕ್ತಿಕ ಸ್ಪರ್ಧೆಗಳು, 5 ಸಾಮೂಹಿಕ ಸ್ಪರ್ಧೆಗಳು ನಡೆಯಲಿದೆ. ಎರಡು ದಿನಗಳ ಕಾರ್ಯಕ್ರಮದಲ್ಲಿ
1ಸಾವಿರಕ್ಕೂ ಅ ಧಿಕ ವಿದ್ಯಾರ್ಥಿಗಳು ಪ್ರತಿಭೆ ಪ್ರದರ್ಶಿಸುತ್ತಾರೆ ಎಂದು ಮಾಹಿತಿ ನೀಡಿದರು.

ಜಿಪಂ ಸದಸ್ಯ ಆರ್‌.ಸದಾಶಿವ ಮಾತನಾಡಿ, ಎನ್‌. ಆರ್‌.ಪುರ ತಾಲೂಕಿನಲ್ಲಿ ಪ್ರಾರಂಭವಾದ ಮಕ್ಕಳ ಮೇಳ ಕಾಲಾನಂತರದಲ್ಲಿ ರಾಜ್ಯಮಟ್ಟದಲ್ಲಿ ಪ್ರತಿಭಾ ಕಾರಂಜಿಯಾಗಿ ಪ್ರಸಿದ್ಧಿ ಪಡೆಯಿತು. ಪರಿಪೂರ್ಣ ವಿದ್ಯಾರ್ಥಿಯಾಗಿ ಹೊರಹೊಮ್ಮಬೇಕಾದರೆ ಶಿಕ್ಷಣ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳು ಅವಶ್ಯಕ. ಮಕ್ಕಳಿಗೆ ಸಂಸ್ಕೃತಿ ಮತ್ತು ಸಂಸ್ಕಾರವನ್ನು ಹೇಳಿಕೊಡುವ ಕೆಲಸವಾಗಬೇಕೆಂದರು.

ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಎನ್‌.ನಾಗೇಶ್‌ ಮಾತನಾಡಿ, ತೀರ್ಪುಗಾರರು ತಾರತಮ್ಯ ಮಾಡದೆ ಪ್ರತಿಭೆಗೆ ತಕ್ಕ ತೀರ್ಪು ನೀಡಬೇಕು ಎಂದರು. ಕಡಹಿನಬೈಲು ಗ್ರಾಪಂ ಅಧ್ಯಕ್ಷೆ ವಿಂದ್ಯಾ ಹೆಗಡೆ ಅಧ್ಯಕ್ಷತೆ ವಹಿಸಿದ್ದರು. ತಾಪಂ ಸದಸ್ಯರಾದ ಸುಧಾಕರ ಆಚಾರ್‌, ಮೀನಾಕ್ಷಿ ಕಾಂತರಾಜ್‌, ಲಲಿತಾ ನಾಗರಾಜ್‌, ಗ್ರಾಪಂ ಸದಸ್ಯರಾದ ಎ.ಎಲ್‌.ಮಹೇಶ್‌, ಕೆ.ಎನ್‌.ನಾಗರಾಜ್‌, ಎಂ.ವಿಜು, ಸುಲೈಮಾನ್‌, ಸುಧಾ, ಗ್ರಾಮಸ್ಥ ಎನ್‌.ಎಂ.ಕಾಂತರಾಜ್‌, ತಾಪಂ ಇಒ ನಯನ, ತಾಲೂಕು ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಆರ್‌.ಭದ್ರೇಗೌಡ, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಎಫ್‌.ಎಂ.ಛಲವಾದಿ, ಬಡ್ತಿ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಕೃಷ್ಣನಾಯ್ಕ, ಶಿಕ್ಷಕರಾದ ಶುಭಾ, ರಾಧಮಣಿ, ತಿಮ್ಮೇಶ್ಮ ಪ್ರಕಾಶ್‌ ಇತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next