Advertisement

ನೃಪತುಂಗ ಸಾಹಿತ್ಯ ಪ್ರಶಸ್ತಿ ಪ್ರದಾನ ಇಂದು

11:41 AM Jan 12, 2018 | Team Udayavani |

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್‌ ಮತ್ತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನೀಡುವ “ನೃಪತುಂಗ ಸಾಹಿತ್ಯ ಪ್ರಶಸ್ತಿ ‘ ಪ್ರದಾನ ಸಮಾರಂಭ ಜ.12ರಂದು ಸಂಜೆ 4.30ಕ್ಕೆ ಸರ್‌.ಪುಟ್ಟಣ್ಣಚೆಟ್ಟಿ ಪುರಭವನದಲ್ಲಿ ನಡೆಯಲಿದೆ.

Advertisement

ಕಾರ್ಯಕ್ರಮದಲ್ಲಿ ಸಾರಿಗೆ ಸಚಿವ ಎಚ್‌.ಎಂ.ರೇವಣ್ಣ ಅವರು ಹಿರಿಯ ಕಾದಂಬರಿಕಾರ ಡಾ.ಎಸ್‌.ಎಲ್‌.ಬೈರಪ್ಪ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಕಸಾಪ ಅಧ್ಯಕ್ಷ ಮನು ಬಳಿಗಾರ್‌ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು,

ಬಿಎಂಟಿಸಿ ಅಧ್ಯಕ್ಷ ಎಂ.ನಾಗರಾಜ್‌ ಯಾದವ್‌, ಉಪಾಧ್ಯಕ್ಷ ಗೋವಿಂದರಾಜು ಮತ್ತಿತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಕನ್ನಡ ಸಾಹಿತ್ಯ ಲೋಕಕ್ಕೆ ಎಸ್‌.ಎಲ್‌. ಬೈರಪ್ಪ ಅವರ ಕೊಡುಗೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗುತ್ತಿದ್ದು, ಪ್ರಶಸ್ತಿಯು 7 ಲಕ್ಷದ ಒಂದು ರೂಪಾಯಿ ನಗದು ಮತ್ತು  ಪ್ರಶಸ್ತಿ ಫ‌ಲಕ ಒಳಗೊಂಡಿದೆ.

Advertisement

Udayavani is now on Telegram. Click here to join our channel and stay updated with the latest news.

Next