Advertisement
2017ರಲ್ಲಿ ಮಹಾಲಕ್ಷ್ಮೀಲೇಔಟ್ ಠಾಣೆ ವ್ಯಾಪ್ತಿಯಲ್ಲಿ ಈಶ್ವರಪ್ಪ ಆಪ್ತ ಸಹಾಯಕರಾಗಿದ್ದ ವಿನಯ್ ಕಾರಿನಲ್ಲಿ ಹೋಗುವಾಗ ಮತ್ತೂಂದು ಕಾರಿನಲ್ಲಿ ಬಂದಿದ್ದ ಐದಾರು ಮಂದಿ ಆರೋಪಿಗಳು, ವಿನಯ್ ಕಾರಿಗೆ ಡಿಕ್ಕಿ ಹೊಡೆದು ನಿಲ್ಲಿಸಿದ್ದರು. ಬಳಿಕ ಕಾರಿಗೆ ಏನಾಗಿದೆ ಎಂದು ನೋಡುವಾಗ ಕಾರಿನಲ್ಲಿ ಅಪಹರಣಕ್ಕೆ ಯತ್ನಿಸಿದ್ದರು. ಆದರೆ, ವಿನಯ್ ಪ್ರತಿರೋಧ ವ್ಯಕ್ತಪಡಿಸಿ, ಆರೋಪಿಗಳನ್ನು ಪಕ್ಕಕ್ಕೆ ತಳ್ಳಿ ಓಡಿದ್ದರು. ಸಾರ್ವಜನಿಕರು ಹೆಚ್ಚಾಗುತ್ತಿದ್ದಂತೆ ಆರೋಪಿಗಳು ಪರಾರಿಯಾಗಿದ್ದರು. ಈ ಪ್ರಕರಣದಲ್ಲಿ ರೌಡಿಶೀಟರ್ ಪ್ರಶಾಂತ್ ಸೇರಿ ಆರು ಮಂದಿಯನ್ನು ಯಶವಂತರ ಉಪವಿಭಾಗದ ಅಂದಿನ ಎಸಿಬಿ ಬಡಿಗೇರ್ ನೇತೃತ್ವದ ತಂಡ ಬಂಧಿಸಿತ್ತು. ನಂತರ ಆರೋಪಿಗಳು ಜಾಮೀನು ಪಡೆದುಕೊಂಡು ಹೊರಬಂದಿದ್ದರು.
Related Articles
Advertisement
ಮತ್ತೂಂದು ಪ್ರಕರಣದಲ್ಲಿ ಒಂಟಿಯಾಗಿ ಓಡಾಡುವ ಸಾರ್ವಜನಿಕರನ್ನು ಗುರಿಯಾಗಿಸಿಕೊಂಡು ದರೋಡೆಗೆ ಸಂಚು ರೂಪಿಸಿದ್ದ ರೌಡಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಜೀವನ್ ಭೀಮಾನಗರ ನಿಲಾಸಿ ಸುರೇಶ್ ಅಲಿಯಾಸ್ ಸೂರಿ (34) ಬಂಧಿತ. ಆರೋಪಿ ಜೆ.ಬಿ.ನಗರ ಠಾಣೆ ವ್ಯಾಪ್ತಿಯ ಎನ್‌ಜಿಬಿಆರ್ ಆರ್ಡೆಡ್ ಬಿಲ್ಡಿಂಗ್ ರಸ್ತೆಯಲ್ಲಿ ಮಾರಕಾಸ್ತ್ರಗಳನ್ನು ಇಟ್ಟುಕೊಂಡು ಸಾರ್ವಜನಿಕರ ದರೋಡೆಗೆ ಸಿದ್ದತೆ ನಡೆಸಿದ್ದ. ಈ ಮಾಹಿತಿ ಮೇರೆಗೆ ದಾಳಿ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ. ಈತನ ವಿರುದ್ಧ ಜೀವನ್ ಭೀಮಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು , ತನಿಖೆ ಮುಂದುವರಿದಿದೆ ಎಂದು ಸಿಸಿಬಿ ಪೊಲೀಸರು ಹೇಳಿದರು.