Advertisement

ರಾಷ್ಟ್ರೀಯ ಭದ್ರತಾ ಪಡೆ ಕಮಾಂಡೋ ಸಾವು

09:35 AM Jan 08, 2020 | Hari Prasad |

ಗುರುಗ್ರಾಮ: ಇಲ್ಲಿನ ಮನೇಸರ್‌ನ ಎನ್‌ಎಸ್‌ಜಿ ಕೇಂದ್ರದಲ್ಲಿ ತರಬೇತಿ ಪಡೆಯುತ್ತಿದ್ದ ವೇಳೆ ರಾಷ್ಟ್ರೀಯ ಭದ್ರತಾ ಪಡೆ (ಎನ್‌ಎಸ್‌ಜಿ) ಕಮಾಂಡೋವೊಬ್ಬರು ಟೆರೇಸ್‌ನಿಂದ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ. ಮೃತರನ್ನು 28 ವರ್ಷದ ರೂಪೇಶ್‌ ಕುಮಾರ್‌ ಎಂದು ಗುರುತಿಸಲಾಗಿದೆ.
ಉತ್ತರ ಪ್ರದೇಶದವರಾದ ರೂಪೇಶ್‌ ಕುಮಾರ್‌ 2016ರಿಂದಲೂ ಎನ್‌ಎಸ್‌ಜಿಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ತರಬೇತಿ ವೇಳೆ ಸಮತೋಲನ ತಪ್ಪಿ ಬಿದ್ದ ಕಾರಣ ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಷ್ಟರಲ್ಲಿ ಅವರು ಅಸುನೀಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next