ಶಿರಸಿ: ಇಲ್ಲಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ 2021-22 ಶೈಕ್ಷಣಿಕ ಸಾಲಿನ ವಾರ್ಷಿಕ ವಿಶೇಷ ಶಿಬಿರ ತಾಲೂಕಿನ ದೊಡ್ನಳ್ಳಿ ಗ್ರಾಮ ಪಂಚಾಯತಿಯ ಬಸಳೇಕೊಪ್ಪದಲ್ಲಿ ಆರಂಭಗೊಂಡಿದೆ.
ಶಿಬಿರಕ್ಕೆ ಚಾಲನೆ ನೀಡಿ ಮಾತಾನಾಡಿದ ಉಪವಿಭಾಗಾಧಿಕಾರಿ ದೇವರಾಜ್ ಆರ್., ಭಾರತದಲ್ಲಿ ಎನ್‌ಎಸ್‌ಎಸ್ ಸಮಾಜಮುಖಿ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡಿದೆ. ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದಲ್ಲಿ ವಿದ್ಯಾರ್ಥಿಗಳು ಭಾಗವಹಿಸುವುದರ ಮೂಲಕ ಗ್ರಾಮೀಣ ಪ್ರದೇಶದ ಜನರ ಜೀವನ ಕ್ರಮವನ್ನು ಅರಿಯುವುದರ ಜೊತೆಗೆ ಶಿಸ್ತು, ಭಾತೃತ್ವ, ಸಂಯಮ, ಸಮಯಪ್ರಜ್ಞೆ ಹಾಗೂ ನಾಯಕತ್ವ ಗುಣ ಬೆಳೆಸಿಕೊಳ್ಳಬೇಕು ಎಂದರು. ಧ್ವಜಾರೋಹಣ ನೆರವೇರಿಸಿ ಶಿಬಿರಕ್ಕೆ ಚಾಲನೆ ನೀಡಿದ ಧಾರವಾಡ ಕೆಎಂಎಫ್ ನಿರ್ದೇಶಕ
ಸುರೇಶ್ಚಂದ್ರ ಹೆಗಡೆ ಕೆಶಿನ್ಮನೆ, ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಸಂಸ್ಕಾರ ಮೈಗೂಡಿಸಿಕೊಳ್ಳಬೇಕು ಎಂದರು.
ದೊಡ್ನಳ್ಳಿ ಗ್ರಾಪಂ ಸದಸ್ಯೆ ಶೀಲಾ ಜಿ.ಹೆಬ್ಬಾರ, ತಾಪಂ ಮಾಜಿ ಸದಸ್ಯೆ ರತ್ನಾ ಶಿವರಾಮ ಶೆಟ್ಟಿ , ಕಾಲೇಜಿನ ಪ್ರಾಚಾರ್ಯ ಪ್ರೊ. ಜನಾರ್ಧನ್ ಭಟ್, ಸುಷ್ಮಾ ಆರ್.ನಾಯ್ಕ ಇತರರು ಇದ್ದರು.
ಪ್ರೊ. ಸಂದೇಶ ಧಾರೇಶ್ವರ ಸ್ವಾಗತಿಸಿದರು. ಕಾಲೇಜಿನ ಎನ್‌ಎಸ್‌ಎಸ್ ಘಟಕದ ಯೋಜನಾಧಿಕಾರಿ ಡಾ.ಸತೀಶ್ ಎನ್.ನಾಯ್ಕ ಪ್ರಾಸ್ತಾವಿಕ ಮಾತನಾಡಿದರು. ಪ್ರೊ. ತಾರಾ ನಾಯ್ಕ ವಂದಿಸಿದರು, ಚೇತನಕುಮಾರ ನಾಯ್ಕ ನಿರೂಪಿಸಿದರು.