ಹೊಸದಿಲ್ಲಿ: ದೇಶಾದ್ಯಂತ ಹೆಚ್ಚುತ್ತಿರುವ ಮಿ ಟೂ ಆಂದೋಲನದ ಬಿಸಿ ಕಾಂಗ್ರೆಸ್‌ಗೆ ತಟ್ಟಿದೆ. ಕಾಂಗ್ರೆಸ್‌ನ ವಿದ್ಯಾರ್ಥಿ ವಿಭಾಗ, ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ(ಎನ್‌ಎಸ್‌ಯುಐ)ದ ಅಧ್ಯಕ್ಷ ಫೈರೋಜ್ ಖಾನ್ ಲೈಂಗಿಕ ಕಿರುಕುಳದ ಆರೋಪದ ಮೇಲೆ ರಾಜೀ ನಾಮೆ ನೀಡಿದ್ದಾರೆ. ಸೋಮ ವಾರ ಸಂಜೆಯೇ ರಾಜೀನಾಮೆ ನೀಡಿದ್ದು, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅಂಗೀಕರಿಸಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ಹೇಳಿವೆ.
ಸದ್ಯ ಮಿ ಟೂ ಅಭಿಯಾನದಲ್ಲಿ ಕೇಂದ್ರ ಸಚಿವ ಎಂ.ಜೆ. ಅಕ್ಬರ್ ಹೆಸರೂ ಕೇಳಿಬಂದಿದ್ದು, ಸಚಿವರ ರಾಜೀನಾಮೆಗಾಗಿ ಕಾಂಗ್ರೆಸ್ ಒತ್ತಾಯಿ ಸಿದೆ. ಅಲ್ಲದೆ, ಈ ಅಭಿಯಾನದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮಾತನಾಡು ತ್ತಿಲ್ಲ ಎಂದೂ ಆರೋಪಿಸಿದೆ. ಆದರೆ, ಕಳೆದ ಜೂನ್‌ನಲ್ಲೇ ತನ್ನ ವಿದ್ಯಾರ್ಥಿ ವಿಭಾಗದ ಅಧ್ಯಕ್ಷರ ಮೇಲೆಯೇ ಲೈಂಗಿಕ ಕಿರುಕುಳದ ಆರೋಪ ಕೇಳಿಬಂದಿದ್ದರೂ ಇನ್ನೂ ಕ್ರಮ ತೆಗೆದುಕೊಂಡಿಲ್ಲ ಎಂಬ ಆರೋಪ ಕಾಂಗ್ರೆಸ್ ಮೇಲೆಯೇ ಇತ್ತು. ಸದ್ಯ ಮೂವರು ಸದಸ್ಯರ ಸಮಿತಿ ರಚಿಸಿರುವ ಕಾಂಗ್ರೆಸ್ ತನಿಖೆಗೆ ಸೂಚಿಸಿದೆ.
ಛತ್ತೀಸ್‌ಗಢದ ಕಾಂಗ್ರೆಸ್ ಕಾರ್ಯ ಕರ್ತೆಯೊಬ್ಬರು ಫೈರೋಜ್ ಖಾನ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದರು. ಇವರೇ ಸ್ವತಃ ರಾಹುಲ್ ಗಾಂಧಿ ಸೇರಿದಂತೆ ಪಕ್ಷದ ಇನ್ನಿತರೆ ಹಿರಿಯ ನಾಯಕರನ್ನು ಭೇಟಿ ಮಾಡಿ ಕಿರುಕುಳದ ಬಗ್ಗೆ ಹೇಳಿದ್ದರು. ಯಾವುದೇ ಕ್ರಮ ತೆಗೆದುಕೊಳ್ಳದ ಕಾರಣದಿಂದಾಗಿ ದೆಹಲಿ ಪಾರ್ಲಿಮೆಂಟ್ ಸ್ಟ್ರೀಟ್‌ನ ಪೊಲೀಸ್ ಠಾಣೆಯಲ್ಲಿ ದೂರನ್ನೂ ನೀಡಿದ್ದರು.
ಸದ್ಯ ದೇಶಾದ್ಯಂತ ನಡೆಯುತ್ತಿರುವ ಮಿ ಟೂ ಅಭಿಯಾನದ ಹಿನ್ನೆಲೆಯಲ್ಲಿ ಫೈರೋಜ್ ರಾಜೀನಾಮೆ ನೀಡಿದ್ದಾರೆ. ಇದುವರೆಗೆ ಆರೋಪ ತಳ್ಳಿಹಾಕಿದ್ದ ಅವರು, ಈಗ ನಿಷ್ಪಕ್ಷಪಾತವಾಗಿ ತನಿಖೆ ನಡೆಯಲಿ ಎಂಬ ಕಾರಣದಿಂದಾಗಿ ರಾಜೀನಾಮೆ ನೀಡಿದ್ದೇನೆ ಎಂದು ಹೇಳಿದ್ದಾರೆ. ಆದರೆ ತಮ್ಮ ವಿರುದ್ಧದ ಆರೋಪ ಸುಳ್ಳು ಎಂದೂ ಪ್ರತಿಪಾದಿಸಿದ್ದಾರೆ.
ಮತ್ತೆ ಆರೋಪ: ವಿದೇಶಾಂಗ ಸಹಾಯಕ ಸಚಿವ ಎಂ.ಜೆ.ಅಕ್ಬರ್ ವಿರುದ್ಧ ಮಂಗಳವಾರ ಮತ್ತೂಬ್ಬರು ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ. ತುಷಿತಾ ಪಟೇಲ್ ಎಂಬ ಪತ್ರಕರ್ತೆ ಯೊಬ್ಬರು 20 ವರ್ಷಗಳ ಹಿಂದೆ ಅಕºರ್ ತಮಗೂ ಲೈಂಗಿಕ ಕಿರುಕುಳ ನೀಡಿದ್ದರು. ಡೆಕ್ಕನ್ ಕ್ರಾನಿಕಲ್ ಪತ್ರಿಕೆಯಲ್ಲಿ ಕೆಲಸ ಮಾಡುವಾಗ ಕಿರುಕುಳ ನೀಡಿದ್ದರು ಎಂದು ಆರೋಪಿಸಿದ್ದಾರೆ. ಅಲ್ಲದೆ ದಯಮಾಡಿ ಸುಳ್ಳು ಹೇಳುವುದನ್ನು ಬಿಡಿ ಎಂದು ಅಕºರ್ ವಿರುದ್ಧ ಕಿಡಿಕಾರಿದ್ದಾರೆ.
ಈ ಮಧ್ಯೆ ತಮ್ಮ ವಿರುದ್ಧದ ಆರೋಪ ಗಳನ್ನು ಕೈಬಿಡುವಂತೆ ಲೇಖಕ-ಗೀತ ರಚನೆಕಾರ ವರುಣ್ ಗ್ರೋವರ್ ಮನವಿ ಮಾಡಿದ್ದಾರೆ. ಈ ಸಂಬಂಧ ಬ್ಲಾಗ್‌ನಲ್ಲಿ ಬರೆದುಕೊಂಡಿರುವ ಅವರು, ಅನಾಮಿಕ ಆರೋಪದಿಂದಾಗಿ ನನ್ನ ಹೆಸರು, ನೆಮ್ಮದಿ ಹಾಳಾಗಿದೆ. ಮಾನಸಿಕ ಕಿರುಕುಳ ಅನುಭವಿಸಿದ್ದೇನೆ ಎಂದಿದ್ದಾರೆ. ಈ ನಡುವೆ ಕಲಾವಿದೆ ನಿಶಾ ಬೋರಾ ಪದ್ಮ ಪ್ರಶಸ್ತಿ ಪುರಸ್ಕೃತ ಜತಿನ್ ದಾಸ್‌ರಿಂದ 14 ವರ್ಷಗಳ ಹಿಂದೆ ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದಾಗಿ ಹೇಳಿಕೊಂಡಿದ್ದಾರೆ. ಆದರೆ ಅವರು ಆರೋಪ ನಿರಾಕರಿಸಿದ್ದಾರೆ.