Advertisement
ನೀಟ್, ಯುಜಿಸಿ-ನೆಟ್ ಪರೀಕ್ಷಾ ಅಕ್ರಮ ಆರೋಪ ಹಿನ್ನೆಲೆಯಲ್ಲಿ ಎನ್‌ಟಿಎ ಸುಧಾರಣೆ, ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರುವ ನಿಟ್ಟಿನಲ್ಲಿ ಜೂ.22ರಂದು ಕೇಂದ್ರ ಸರಕಾರ ಉನ್ನತ ಮಟ್ಟದ ಸಮಿತಿ ರಚಿಸಿತ್ತು.ಪರೀಕ್ಷೆಗಳನ್ನು ನಡೆಸುವ ವ್ಯವಸ್ಥೆಯಲ್ಲಿ ಆಗಬೇಕಾಗಿರುವ ಬದಲಾವಣೆ, ಮಾಹಿತಿ ಸಂಗ್ರಹಿಸಿ ಸುರಕ್ಷಿತವಾಗಿ ಇರಿಸುವುದು, ಎನ್‌ಟಿಎ ಕಾರ್ಯನಿರ್ವಹಣೆ, ಬದಲಾಗಿರುವ ಪರಿಸ್ಥಿತಿಯಲ್ಲಿ ಸಂಸ್ಥೆ ಹೇಗಿರಬೇಕು ಎಂಬುದರ ಕುರಿತು ಸರಕಾರಿ ಸಂಸ್ಥೆಗಳು, ಉನ್ನತ ಶಿಕ್ಷಣ ಕ್ಷೇತ್ರದ ತಜ್ಞರು, ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ಸಲಹೆ ನೀಡಬೇಕು ಎಂದು ಶಿಕ್ಷಣ ಸಚಿವಾಲಯ ಟ್ವೀಟ್ ಮೂಲಕ ಕೇಳಿಕೊಂಡಿದೆ.