Advertisement

ನುಡಿಜಾತ್ರೆಗೆ ಮದಕರಿಪುರ ಸಜ್ಜು

09:05 AM Feb 09, 2019 | |

ಚಿತ್ರದುರ್ಗ: ತಾಲೂಕು ಮಟ್ಟದ ನಾಲ್ಕನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಕಲ ಸಿದ್ಧತೆ ಮಾಡಿದ್ದು, ಇಡೀ ಗ್ರಾಮವೇ ಸಂಪೂರ್ಣ ಕನ್ನಡಮಯವಾಗಿದೆ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಎಂ.ಆರ್‌.ದಾಸೇಗೌಡ ತಿಳಿಸಿದ್ದಾರೆ.

Advertisement

ತಾಲೂಕಿನ ಮದಕರಿಪುರದ ಸರ್ಕಾರಿ ಶಾಲೆಗೆ ಬಣ್ಣ, ಸುಣ್ಣ ಬಳಿದು ಸಿಂಗಾರ ಮಾಡಿದ್ದು, ಗ್ರಾಮದ ಪ್ರತಿಯೊಂದು ಬೀದಿಗಳಲ್ಲಿ ಕನ್ನಡ ಧ್ವಜದ ಬಣ್ಣದ ಪೇಪರ್‌ ಅಂಟಿಸಿ ಚಪ್ಪರ ನಿರ್ಮಿಸಲಾಗಿದೆ. ಅಲ್ಲದೆ, ವೇದಿಕೆ ಸಂಪೂರ್ಣ ಸಿದ್ಧಗೊಂಡಿದ್ದು, ಹಾಸ್ಯ ಸಾಹಿತಿ ಬಿ.ತಿಪ್ಪೇರುದ್ರಪ್ಪನವರ ವೇದಿಕೆ, ಸ್ವಾತಂತ್ರ್ಯ ಹೋರಾಟಗಾರ ಸಾ.ವಾಸುದೇವರಾವ್‌ ಮಂಟಪ, ದೊಡ್ಡ ಮಲ್ಲಪ್ಪ ಮಹಾದ್ವಾರ, ಗಮಕಿ ಕಲ್ಲಪ್ಪರ ಈಶಣ್ಣ ಭೋಜನ ಶಾಲೆಯನ್ನು ಸಜ್ಜುಗೊಳಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಫೆ.9ರಂದು ಬೆಳಗ್ಗೆ 7.45ಕ್ಕೆ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಲಿದ್ದಾರೆ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಡಾ| ದೊಡ್ಡಮಲ್ಲಯ್ಯ ಪರಿಷತ್‌ನ ಧ್ವಜಾರೋಹಣ ನೆರವೇರಿಸಲಿದ್ದಾರೆ. ನಾಡಧ್ವಜವನ್ನು ತಾಲೂಕು ಕಸಾಪ ಅಧ್ಯಕ್ಷ ದಾಸೇಗೌಡ ನೆರವೇರಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ನಂತರ ಬೆಳಗ್ಗೆ 8.30ಕ್ಕೆ ಸಮ್ಮೇಳನಾಧ್ಯಕ್ಷ ಎಸ್‌.ಆರ್‌.ಗುರುನಾಥ್‌ ಅದ್ಧೂರಿ ಮೆರವಣಿಗೆ ಆರಂಭವಾಗಲಿದ್ದು, ಮಾಜಿ ಜಿಪಂ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್‌ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ಬೆಳಗ್ಗೆ 11ಕ್ಕೆ ಹಾಸ್ಯ ಸಾಹಿತಿ ತಿಪ್ಪೇರುದ್ರಪ್ಪ ವೇದಿಕೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ವೆಂಕಟರಮಣಪ್ಪ ಕಾರ್ಯಕ್ರಮ ಉದ್ಘಾಟಿಸಲಿದ್ದು, ಶಾಸಕ ತಿಪ್ಪಾರೆಡ್ಡಿ ಅಧ್ಯಕ್ಷತೆ ವಹಿಸುವರು. ಸಾಹಿತಿ ಪ್ರೊ| ಶ್ರೀಕಂಠ ಕೊಡಿಗೆ ಪ್ರಧಾನ ಭಾಷಣ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next