ಹರಿಯಾಣ: ಕೋಮು ಗಲಭೆ ಪೀಡಿತ ಹರ್ಯಾಣದ ನೂಹ್‌ನಲ್ಲಿ ನಡೆಯುತ್ತಿದ್ದ ಬುಲ್ಡೋಜರ್ ಕಾರ್ಯಾಚರಣೆ ಸೋಮವಾರ ಹೈಕೋರ್ಟ್ ತಡೆ ನೀಡಿದೆ.
ಹರಿಯಾಣದ ಹಿಂಸಾಚಾರ ಪೀಡಿತ ನುಹ್ ಜಿಲ್ಲೆಯ ಮೇವಾತ್‌ನಲ್ಲಿ ಕಳೆದ ನಾಲ್ಕು ದಿನಗಳಿಂದ ನಡೆಯುತ್ತಿದ್ದ ಧ್ವಂಸ ಕಾರ್ಯಾಚರಣೆಗೆ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಸೋಮವಾರ ತಡೆ ನೀಡಿದ್ದು ಹೈಕೋರ್ಟ್ ಕೂಡ ಈ ಪ್ರಕರಣವನ್ನು ಸ್ವಯಂ ಪ್ರೇರಿತವಾಗಿ ಪರಿಗಣಿಸಿದೆ.
ಕೋಮು ಗಲಭೆಗೆಯನ್ನು ನಡೆಸಿದರೆನ್ನಲಾದ ವಲಸಿಗರ ನಿವಾಸಗಳನ್ನು ತೆರವುಗೊಳಿಸಿದ್ದು ಅಲ್ಲದೆ ಅಕ್ರಮವಾಗಿ ನಿರ್ಮಿಸಲಾಗಿದ್ದ ಹಲವಾರು ಅಂಗಡಿಗಳನ್ನು ಬುಲ್ಡೋಜರ್ ಬಳಸಿ ನೆಲಸಮಗೊಳಿಸಲಾಗಿತ್ತು. ಸರಕಾರದ ಈ ನಿರ್ಧಾರಕ್ಕೆ ವಿರೋಧ ವ್ಯಕ್ತವಾಗಿದ್ದು, ಅಲ್ಲದೆ ತಮಗೆ ನೊಟೀಸ್ ನೀಡದೆಯೇ ತೆರವು ಕಾರ್ಯಾಚರಣೆ ನಡೆಸಲಾಗಿದೆ ಎಂದು ಆರೋಪಿಸಿ ಹೈ ಕೋರ್ಟ್ ಮೆಟ್ಟಿಲೇರಿದ್ದರು. ಕೋರ್ಟ್ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ನಾಲ್ಕು ದಿನಗಳಿಂದ ನಡೆಯುತ್ತಿದ್ದ ಬುಲ್ಡೋಜರ್ ಕಾರ್ಯಾಚರಣೆಗೆ ತಡೆ ನೀಡಿ ಆದೇಶ ಹೊರಡಿಸಿದೆ.
ಇದನ್ನು ಓದಿ: Delhi: ಏಮ್ಸ್ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ಅಗ್ನಿಶಾಮಕ ವಾಹನ ದೌಡು, ರೋಗಿಗಳ ಸ್ಥಳಾಂತರ
ಹಿಂಸಾಚಾರದ ವೇಳೆ ಹೋಟೆಲ್ ಒಂದರಲ್ಲಿ ಕಲ್ಲುಗಳನ್ನು ಶೇಖರಿಸಿಟ್ಟ ಹಿನ್ನೆಲೆಯಲ್ಲಿ ಭಾನುವಾರ ಮೂರು ಅಂತಸ್ಥಿನ ಹೋಟೆಲನ್ನು ಬುಲ್ಡೋಜರ್ ಬಳಸಿ ನೆಲಸಮಗೊಳಿಸಲಾಗಿತ್ತು.
ಹರ್ಯಾಣದಲ್ಲಿ ನಡೆದ ಕೋಮುಗಲಭೆಯಲ್ಲಿ ಇದುವರೆಗೆ 6 ಮಂದಿ ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ ಕೋರ್ಟ್ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿತ್ತು. ಈಗ ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಧೀರೇಂದ್ರ ಖಡ್ಗತ ಬುಲ್ಡೋಜರ್ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.