Advertisement

ಶತಕ ದಾಟಿದ ಸೋಂಕಿತರ ಸಂಖ್ಯೆ

04:59 PM Jul 03, 2020 | Suhan S |

ಕೊಪ್ಪಳ: ಜಿಲ್ಲೆಯಲ್ಲಿ ಗುರುವಾರ ಮತ್ತೆ ನಾಲ್ವರಿಗೆ ಕೋವಿಡ್ ಸೋಂಕು ದೃಢಪಡುವ ಮೂಲಕ ಸೋಂಕಿತರ ಸಂಖ್ಯೆ ಶತಕ ದಾಟಿದೆ. 49 ವರ್ಷದ ವ್ಯಕ್ತಿ ಸೋಂಕಿನಿಂದ ಬಳಲಿ ಮೃತಪಟ್ಟಿದ್ದು, ದಿವಟರ್‌ ನಗರವನ್ನು ಸೀಲ್‌ಡೌನ್‌ ಮಾಡಲಾಗಿದೆ.

Advertisement

ಇನ್ನೂ ಜಿಲ್ಲಾ ಕೋವಿಡ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ 23 ಜನರು ಗುಣಮುಖರಾದ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಜಿಲ್ಲೆಯಲ್ಲಿ ಬುಧವಾರದ ಅಂತ್ಯಕ್ಕೆ 97 ಜನರಿಗೆ ಕೋವಿಡ್ ದೃಢಪಟ್ಟಿದೆ. ಗುರುವಾರ ಮತ್ತೆ ನಾಲ್ವರಿಗೆ ಸೋಂಕು ದೃಢಪಡುವ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 101ಕ್ಕೆ ಏರಿಕೆಯಾಗಿದೆ.

ದಿವಟರ್‌ ನಗರ ಸೀಲ್‌ಡೌನ್‌: ಕೊಪ್ಪಳದ ದಿವಟರ ನಗರದ 49 ವರ್ಷದ ವ್ಯಕ್ತಿ ಜೂ. 29ರಂದು ಉಸಿರಾಟದ ತೊಂದರೆಯಿಂದ ಬಳಲಿ ಆಸ್ಪತ್ರೆಗೆ ದಾಖಲಾಗಿದ್ದರು. ಜಿಲ್ಲಾಡಳಿತವು ಜೂ. 30ರಂದು ಅವರ ಗಂಟಲು ದ್ರವ ಮಾದರಿ ಪರೀಕ್ಷೆಗೊಳಪಡಿಸಿದಾಗ ಆ ವ್ಯಕ್ತಿಗೆ ಕೋವಿಡ್ ಸೋಂಕು ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಜಿಲ್ಲಾ ಕೋವಿಡ್‌ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಆದರೆ ಗುರುವಾರ ಮೃತಪಟ್ಟಿದ್ದಾರೆ.

23 ಜನ ಗುಣಮುಖ: ಗುರುವಾರ 23 ಜನರು ಗುಣಮುಖರಾದ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು. ಒಟ್ಟಾರೆ ಜಿಲ್ಲೆಯಲ್ಲಿ 41 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಇನ್ನೂ 958 ಜನರ ಗಂಟಲು ವರದಿ ಬರುವುದು ಬಾಕಿಯಿದೆ.

Advertisement

Udayavani is now on Telegram. Click here to join our channel and stay updated with the latest news.

Next