ನವದೆಹಲಿ: ಪ್ರವಾದಿ ಮುಹಮ್ಮದ್ ಪೈಗಂಬರ್ ಅವರ ಅವಹೇಳನ ವಿವಾದಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ದೇಶದ ವಿವಿಧೆಡೆ ನಡೆದ ಹಿಂಸಾಚಾರವನ್ನು ಖಂಡಿಸಿ ದೇಶಾದ್ಯಂತ ಪ್ರತಿಭಟನೆ ನಡೆಸಲು ವಿಶ್ವಹಿಂದೂ ಪರಿಷತ್ ಮಂಗಳವಾರ (ಜೂನ್ 14) ಕರೆ ನೀಡಿದೆ.
ಇದನ್ನೂ ಓದಿ:ಸಾಮಾನ್ಯರಿಗೆ ಅನ್ವಯವಾಗುವ ಕಾನೂನು ಗಾಂಧಿ ಕುಟುಂಬಕ್ಕೂ ಅನ್ವಯವಾಗುತ್ತದೆ: ತೇಜಸ್ವಿ ಸೂರ್ಯ
ದೇಶದಲ್ಲಿ ಇಸ್ಲಾಮಿಕ್ ಜಿಹಾದಿ ಮೂಲಭೂತವಾದಿಗಳ ತೀವ್ರಗಾಮಿ ಘಟನೆಗಳು ಹೆಚ್ಚಳವಾಗುತ್ತಿದ್ದು, ಇದರ ವಿರುದ್ಧ ಜೂನ್ 16ರಂದು ದೇಶಾದ್ಯಂತ ಪ್ರತಿ ಜಿಲ್ಲಾ ಕೇಂದ್ರಗಳಲ್ಲಿ ಆರ್ ಎಸ್ ಎಸ್ ನ ಅಂಗಸಂಸ್ಥೆಯಾದ ವಿಶ್ವಹಿಂದೂ ಪರಿಷತ್ ನ ಕಾರ್ಯಕರ್ತರು ಧರಣಿ ನಡೆಸಲಿದ್ದಾರೆ.
ಭಾರತದಲ್ಲಿ ನಡೆಯುತ್ತಿರುವ ಕೃತ್ಯಗಳ ಬಗ್ಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಮನವಿಯನ್ನು ಸಲ್ಲಿಸಲಾಗುವುದು ಎಂದು ವಿಶ್ವಹಿಂದೂ ಪರಿಷತ್ ತಿಳಿಸಿರುವುದಾಗಿ ವರದಿಯಾಗಿದೆ. ಜೂನ್ 10ರಂದು ದೇಶದ ವಿವಿಧ ಭಾಗದಲ್ಲಿ ನಡೆದ ಹಿಂಸಾಚಾರದ ವಿರುದ್ಧ ಪ್ರತಿಭಟಿಸಲು ದೆಹಲಿಯ ವಿಎಚ್ ಪಿ ಘಟಕವು ದೇವಾಲಯಗಳಲ್ಲಿ ಒಟ್ಟುಗೂಡಿ, ಸಾಮೂಹಿಕವಾಗಿ ಹನುಮಾನ್ ಚಾಲೀಸಾ ಪಠಿಸುವಂತೆ ಕರೆ ನೀಡಿದೆ.
ಹಿಂಸಾಚಾರ ಪೂರ್ವ ನಿರ್ಧರಿತ ಕೃತ್ಯವಾಗಿದ್ದು, ಜಾಗತಿಕ ಮಟ್ಟದಲ್ಲಿ ಭಾರತದ ಹೆಸರಿಗೆ ಕಳಂಕ ತರಲು ನಡೆಸಿದ ಹುನ್ನಾರವಾಗಿದೆ ಎಂದು ವಿಶ್ವಹಿಂದೂ ಪರಿಷತ್ ಆರೋಪಿಸಿದೆ. ಪ್ರವಾದಿ ಮುಹಮ್ಮದ್ ಪೈಗಂಬರ್ ಕುರಿತು ಬಿಜೆಪಿಯ ನೂಪುರ್ ಶರ್ಮಾ ಮತ್ತು ನವೀನ್ ಜಿಂದಾಲ್ ನೀಡಿದ್ದ ಹೇಳಿಕೆ ವಿವಾದಕ್ಕೀಡಾಗಿತ್ತು. ಬಳಿಕ ದೇಶದ ಹಲವೆಡೆ ಜೂನ್ 10ರಂದು ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸಿದ ನಂತರ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು ಎಂದು ವರದಿ ತಿಳಿಸಿದೆ.