Advertisement

ಲ್ಯಾಂಡ್ ಲಿಂಕ್ಸ್ ಗೆ ನರ್ಮ್ ಬಸ್ ಸಂಚಾರ ಆರಂಭ: ಶಾಸಕ ಡಾ.ಭರತ್ ಶೆಟ್ಟಿ ವೈ ಉದ್ಘಾಟನೆ

01:45 PM Sep 29, 2021 | Team Udayavani |

ಕೊಂಚಾಡಿ: ಲ್ಯಾಂಡ್ ಲಿಂಕ್ಸ್  ಪ್ರದೇಶದ ಜನರ ಬಹುದಿನದ ಬೇಡಿಕೆಯಾದ ಸರಕಾರಿ ಬಸ್ ಓಡಾಟದ ಕನಸು ನನಸಾಗಿದೆ. ಬುಧವಾರ ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ನರ್ಮ್ ಬಸ್ ಸಂಚಾರಕ್ಕೆ ಹಸಿರು ನಿಶಾನೆ ತೋರಿದರು.

Advertisement

ಬಳಿಕ ಮಾತನಾಡಿದ ಅವರು ಈ ಭಾಗದಲ್ಲಿ ಶಾಲಾ ವಿದ್ಯಾರ್ಥಿಗಳು, ನೌಕರಿಗೆ ಹೋಗುವ ಜನರಿಗೆ ಅನುಕೂಲವಾದ ಸಮಯದಲ್ಲಿ ನರ್ಮ್ ಬಸ್ ಸಂಚಾರ ಅವಕಾಶ ನೀಡಲಾಗಿದೆ.ಪ್ರತೀ 45 ನಿಮಿಷಕ್ಕೆ ನರ್ಮ್ ಬಸ್ ಓಡಾಟ ನಡೆಸಲಿದೆ.ಇದೀಗ ಪ್ರಾಯೋಗಿಕವಾಗಿ ಸಮಯದಲ್ಲಿ ಓಡಾಟ ನಡೆಸಲಿದೆ.ಬಳಿಕ ಜನರ ಬೇಡಿಕೆ ತಕ್ಕಂತೆ ಸಮಯ ಬದಲಾವಣೆ ಮಾಡಲಾಗುವುದು.ಜನರು ಹೆಚ್ವಿನ ಸಂಖ್ಯೆಯಲ್ಲಿ ಪ್ರಯಾಣಿಸುವ ಮೂಲಕ ಸರಕಾರಿ ಬಸ್ ನಿರಂತರವಾಗಿ ಓಡಾಟ ನಡೆಸುವಂತೆ ನೋಡಿಕೊಳ್ಳ ಬೇಕು .ವಿದ್ಯಾರ್ಥಿಗಳು, ಹಿರಿಯ ನಾಗರಿಕರಿಗೆ ,ವಿಕಲ ಚೇತನರಿಗೆ ಸಹಿತ ಅರ್ಹ ಫಲಾನುಭವಿಗಳಿಗೆ  ಬಸ್ ಪಾಸ್ ಸೌಲಭ್ಯವಿದೆ. ಕೆಎಸ್ ಆರ್ ಟಿಸಿ ನಿಲ್ದಾಣದಿಂದ ಕಂಕನಾಡಿ,ಬಜಾಲ್ ವರೆಗೆ ವ್ಯಾಪ್ತಿ ಹೊಂದಿದೆ ಎಂದರು.

ಮಂಗಳೂರು ಉತ್ತರ ವಿಧಾನಸಭಾ ವ್ಯಾಪ್ತಿಯ ನೀರುಮಾರ್ಗ,ವಾಮಂಜೂರು ,ಮೂಡುಶೆಡ್ಡೆ ಸಹಿತ ಗ್ರಾಮಾಂತರ ಪ್ರದೇಶಗಳಲ್ಲಿ ಅಗತ್ಯವಿರುವ ಕಡೆ ನರ್ಮ್ ಬಸ್ ಓಡಿಸಲಾಗುದು ಎಂದು ಈ ಸಂದರ್ಭ ಶಾಸಕರು ನುಡಿದರು.

ಕೆಎಸ್ ಆರ್ಟಿಸಿ ಡಿಸಿ ಅರುಣ್ ಎಸ್.ಎನ್,ಡಿಟಿಒ ಎಚ್.ಆರ್.ಕಮಲ್ ಕುಮಾರ್, ಕಾರ್ಪೊರೇಟರ್ ರಂಜಿನಿ,ಬಿಜೆಪಿ ಪದಾಧಿಕಾರಿಗಳುಲ್ಯಾಂಡ್ ಲಿಂಕ್ಸ್ ಬಡಾವಣೆಯ ಜನರು ಈ ಸಂದರ್ಭ ಉಪಸ್ಥಿತರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next