Advertisement

ಆರೋಗ್ಯ ಕೇಂದ್ರದಲ್ಲಿ ನರ್ಸ್ ರನ್ನು ಕಟ್ಟಿ ಹಾಕಿ ಅತ್ಯಾಚಾರ; ಅಪ್ರಾಪ್ತ ಸೇರಿ ಮೂವರ ಬಂಧನ

03:05 PM Oct 23, 2022 | Team Udayavani |

ರಾಯ್ಪುರ: ಆರೋಗ್ಯ ಕೇಂದ್ರದಲ್ಲಿ ನರ್ಸ್ ಒಬ್ಬರನ್ನು ಕಟ್ಟಿಹಾಕಿ ನಾಲ್ವರು ಸಾಮೂಹಿಕ ಅತ್ಯಾಚಾರಗೈದ ಘಟನೆ ಛತ್ತೀಸ್‌ಗಢದಲ್ಲಿ ನಡೆದಿದೆ.

Advertisement

ಅವರಲ್ಲಿ ಒಬ್ಬ ಅಪ್ರಾಪ್ತ ಎಂದು ಪೊಲೀಸರು ತಿಳಿಸಿದ್ದಾರೆ. 17 ವರ್ಷದ ಯುವಕ ಸೇರಿದಂತೆ ಮೂವರನ್ನು ಬಂಧಿಸಲಾಗಿದ್ದು, ನಾಲ್ಕನೇ ಆರೋಪಿ ಪರಾರಿಯಾಗಿದ್ದಾನೆ.

ಅತ್ಯಾಚಾರಗೈದ ಆರೋಪಿಗಳು ಹಲ್ಲೆ ನಡೆಸಿದ್ದು, ಪೊಲೀಸರಿಗೆ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ನರ್ಸ್ ಆರೋಪಿಸಿದ್ದಾರೆ.

ಇದನ್ನೂ ಓದಿ:ಗಂಡನಿಗಾಗಿ ಕಿಡ್ನಿ ದಾನ ಮಾಡಿದ ಪತ್ನಿ: ಅಪ್ಪ – ಅಮ್ಮನ ಸುಂದರ ಬಾಂಧವ್ಯವನ್ನು ಹಂಚಿಕೊಂಡ ಮಗ

ಮಹೇಂದ್ರಗಢ ಜಿಲ್ಲೆಯ ಚಿಪ್ಚಿಪಿ ಗ್ರಾಮದಲ್ಲಿ ಈ ಘಟನೆ ನಡದಿದೆ. ಶುಕ್ರವಾರ ಸಂಜೆ ಮೂರು ಗಂಟೆ ಸಮಯದಲ್ಲಿ ಸಂತ್ರಸ್ಥೆಯು ಏಕಾಂಗಿಯಾಗಿ ಆರೋಗ್ಯ ಕೇಂದ್ರದಲ್ಲಿದ್ದರು. ಇದನ್ನು ಗಮನಿಸಿದ ಆರೋಪಿಗಳು ಕೇಂದ್ರಕ್ಕೆ ನುಗ್ಗಿ ಆಕೆಯನ್ನು ಕಟ್ಟಿಹಾಕಿ, ಅವಳ ಬಾಯಿಯನ್ನು ಬಿಗಿದರು. ನಂತರ ಆಕೆಯ ಮೇಲೆ ಸಾಮೂಹಿಕವಾಗಿ ಅತ್ಯಾಚಾರಗೈದರು ಎಂದು ಪೊಲೀಸರು ಹೇಳಿದ್ದಾರೆ.

Advertisement

ಬಳಿಕ ನರ್ಸ್ ಮನೆಯವರಿಗೆ ಮಾಹಿತಿ ನೀಡಿದ್ದು, ಬಳಿಕ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ.

ಘಟನೆಗೆ ತೀವ್ರ ಖಂಡನೆ ವ್ಯಕ್ತವಾಗಿದೆ. ಭೂಪೇಶ್ ಭಾಗೇಲ್ ನೇತೃತ್ವದ ಛತ್ತೀಸ್‌ಗಢ ಸರ್ಕಾರದ ವಿರುದ್ಧ ಭಾರತೀಯ ಜನತಾ ಪಕ್ಷದ (ಬಿಜೆಪಿ) ಮುಖಂಡರು ಪ್ರತಿಭಟನೆ ನಡೆಸಿದರು.

Advertisement

Udayavani is now on Telegram. Click here to join our channel and stay updated with the latest news.

Next