Advertisement

ನರ್ಸಿಂಗ್‌ ಕಾಲೇಜಿಗೆ ಐಎನ್‌ಸಿ ಅನುಮತಿ ಬೇಕಿಲ್ಲ

11:42 AM Jul 24, 2017 | Team Udayavani |

ಬೆಂಗಳೂರು: ರಾಜ್ಯದ ನರ್ಸಿಂಗ್‌ ಕಾಲೇಜುಗಳು ನರ್ಸಿಂಗ್‌ ಕೋರ್ಸ್‌ಗಳನ್ನು ನಡೆಸುವುದಕ್ಕೆ ರಾಷ್ಟ್ರೀಯ ನರ್ಸಿಂಗ್‌ ಕೌನ್ಸಿಲ್‌ನ (ಐ.ಎನ್‌.ಸಿ.) ಅನುಮತಿ ಅಗತ್ಯವಿಲ್ಲ ಎಂದು ಕರ್ನಾಟಕ ರಾಜ್ಯ ನರ್ಸಿಂಗ್‌ ಹಾಗೂ ಇತರೆ ಸಂಬಂಧಿತ ಆರೋಗ್ಯ ವಿಜ್ಞಾನಗಳ ಸಂಸ್ಥೆಗಳ ವ್ಯವಸ್ಥಾಪಕ ಮಂಡಳಿಗಳ ಒಕ್ಕೂಟದ ಅಧ್ಯಕ್ಷ ಎಸ್‌.ಶಿವಕುಮಾರ್‌ ತಿಳಿಸಿದ್ದಾರೆ.

Advertisement

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಕಾಲೇಜುಗಳು ನರ್ಸಿಂಗ್‌ ಕೋರ್ಸ್‌ಗಳನ್ನು ನಡೆಸಲು ಐಎನ್‌ಸಿ ಅನುಮತಿ ಪಡೆಯುವ ಅಗತ್ಯವಿಲ್ಲ ಎಂದು ವೈದ್ಯಕೀಯ ಶಿಕ್ಷಣ ಇಲಾಖೆ 2016ರ ಡಿಸೆಂಬರ್‌ನಲ್ಲಿ ಆದೇಶವನ್ನು ಹೊರಡಿಸಿದೆ. ಅಲ್ಲದೇ ಸುಪ್ರೀಂಕೋರ್ಟ್‌ ಹಾಗೂ ದೇಶದ ವಿವಿಧ ರಾಜ್ಯಗಳ ಹೈಕೋರ್ಟ್‌ಗಳೂ ಸಹ ಈ ಬಗ್ಗೆ ಸ್ಪಷ್ಟ ಆದೇಶಗಳನ್ನು ನೀಡಿವೆ.

ಈ ಬಗ್ಗೆ ವಿದ್ಯಾರ್ಥಿಗಳು ಮತ್ತು ಪೋಷಕರು ಗೊಂದಲಕ್ಕೀಡಾಗುವ ಅವಶ್ಯಕತೆಯಿಲ್ಲ ಎಂದು ಸ್ಪಷ್ಟಪಡಿಸಿದರು. ಪತ್ರಿಕಾ ಗೋಷ್ಠಿಯಲ್ಲಿ  ಪ್ರಧಾನ ಕಾರ್ಯದರ್ಶಿ ಡಾ.ವೆಂಕಟ ಗಿರಿ, ಅಧ್ಯಕ್ಷ ಡಾ.ಬಿ.ಸಿ.ಭಾಗವಾನ ಮತ್ತಿತರರು ಉಪಸ್ಥಿತರಿದ್ದರು. 

Advertisement

Udayavani is now on Telegram. Click here to join our channel and stay updated with the latest news.

Next