Advertisement
ಪಶ್ಚಿಮ ಬಂಗಾಳ ಮೂಲದ ದಿಯಾ ಮಂಡೋಲಿ (21) ಮೃತ ನರ್ಸಿಂಗ್ ವಿದ್ಯಾರ್ಥಿನಿ. ಜಾಲಹಳ್ಳಿಯಲ್ಲಿರುವ ಮದರ್ ಥೆರೆಸಾ ನರ್ಸಿಂಗ್ ಕಾಲೇಜಿನಲ್ಲಿ 2ನೇ ವರ್ಷದ ನರ್ಸಿಂಗ್ ಓದುತ್ತಿದ್ದಳು. ಎಂಇಎಸ್ ರಸ್ತೆಯಲ್ಲಿರುವ ನರ್ಸಿಂಗ್ ಹಾಸ್ಟೆಲ್‌ನಲ್ಲಿ ವಾಸವಾಗಿದ್ದಳು. ಈ ಮಧ್ಯೆ ಕೆಲ ದಿನಗಳಿಂದ ಕೌಟುಂಬಿಕ ವಿಚಾರವಾಗಿ ಮಾನಸಿಕ ಖನ್ನತೆಗೊಳಗಾಗಿದ್ದಳು. ಶನಿವಾರ ರಾತ್ರಿ 7.30 ರ ವೇಳೆ ಸ್ನೇಹಿತರು ಮಲಗಿದ ವೇಳೆ ರೂಮ್ ಬಾಗಿಲು ಹಾಕಿಕೊಂಡು ವೇಲಿನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬಳಿಕ ಅದನ್ನು ಗಮನಿಸಿದ ಸ್ನೇಹಿತರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿ ಮೃತದೇಹವನ್ನು ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬದವರಿಗೆ ಹಸ್ತಾಂತರ ಮಾಡಿದ್ದಾರೆ.
Advertisement
Nursing student: ಹಾಸ್ಟೆಲ್‌ನಲ್ಲಿ ನರ್ಸಿಂಗ್ ವಿದ್ಯಾರ್ಥಿನಿ ನೇಣಿಗೆ ಶರಣು
10:49 AM Jul 09, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.