Advertisement
ಅವರು ನಿಟ್ಟೆ ಕ್ಯಾಂಪಸ್ಸಿನ ಕ್ಷೇಮ ಆಡಿಟೋರಿಯಂನಲ್ಲಿ ಶುಕ್ರವಾರ ಕೆ.ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ, ಜಸ್ಟೀಸ್ ಕೆ.ಎಸ್. ಹೆಗ್ಡೆ ಚಾರಿಟೆಬಲ್ ಆಸ್ಪತ್ರೆಯ ಡಯಟೆಟಿಕ್ಸ್ ಆ್ಯಂಡ್ ನ್ಯೂಟ್ರಿಶನ್ ವಿಭಾಗದ ಆಶ್ರಯದಲ್ಲಿ ನಡೆದ ನ್ಯಾಶನಲ್ ನ್ಯೂಟ್ರಿಶಿಯನ್ ಕಾನ್ಫರೆನ್ಸ್ “ನ್ಯೂಟ್ರಿಕಾನ್ -2018’ಗೆ ಚಾಲನೆ ನೀಡಿ ಮಾತನಾಡಿದರು.
ಹಿಂದೆ ಆರೋಗ್ಯಕರ ಆಹಾರ ಪದ್ಧತಿಯಿಂದ ಯಾವುದೇ ಸಮಸ್ಯೆಗಳಿರಲಿಲ್ಲ. ಆದರೆ ಇಂದು ಎಲ್ಲ ಆಹಾರಗಳು ರಾಸಾಯನಿಕಗಳಿಂದ ಕೂಡಿವೆ. ಇದರೊಂದಿಗೆ ದೇಶದಲ್ಲಿ ಮಧುಮೇಹ, ಹೃದಯ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿರುವವರ ಸಂಖ್ಯೆ ಹೆಚ್ಚುತ್ತಿದ್ದು. ಇಂತಹ ಜನರಿಗೆ ಪೌಷ್ಟಿಕ ಆಹಾರ ನೀಡುವ ವಿಧಾನ ಮತ್ತು ಅದರಿಂದ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ನ್ಯೂಟ್ರಿಶಿಯನ್‌ಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದ ಅವರು, ಸರಕಾರ ಇದನ್ನು ಗಮನದಲ್ಲಿಟ್ಟುಕೊಂಡು ಸ್ವಸ್ಥ ಭಾರತ ಕಲ್ಪನೆ ಜತೆಗೆ ಪೌಷ್ಟಿಕತೆಗೆ ಹೆಚ್ಚಿನ ಒತ್ತು ನೀಡುವುದರ ಜತೆಗೆ ಗ್ರಾಮೀಣ ಭಾಗಗಳಲ್ಲಿ ಪರಿಶುದ್ಧ ಕುಡಿಯುವ ನೀರಿನ ಘಟಕವನ್ನು ಸ್ಥಾಪಿಸುವ ಮೂಲಕ ಉತ್ತಮ ಹೆಜ್ಜೆಯನ್ನು ಇಟ್ಟಿದೆ. ಇದರಿಂದ ಗ್ರಾಮೀಣ ಭಾಗದ ಜನರಲ್ಲಿ ಜಾಗೃತಿಯ ಜತೆಗೆ ರೋಗಗಳನ್ನು ತಡೆಗಟ್ಟಲು ಸಾಧ್ಯ. ಪೌಷ್ಟಿಕ ತಜ್ಞರ ಸಮ್ಮೇಳನ ದೇಶದಲ್ಲಿ ಇಂತಹ ಜಾಗೃತಿಯನ್ನು ಮೂಡಿಸಲು ವೇದಿಕೆಯಾಗಲಿ ಎಂದರು. ನಿಟ್ಟೆ ಉಪಕುಲಪತಿ ಡಾ| ಸತೀಶ್ ಕುಮಾರ್ ಭಂಡಾರಿ ಅಧ್ಯಕ್ಷತೆ ವಹಿಸಿದ್ದರು. ಡಾ| ಇಂದ್ರಾಣಿ ಕರುಣಾಸಾಗರ್ ದಿಕ್ಸೂಚಿ ಭಾಷಣ ಮಾಡಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಇಂಡಿಯನ್ ಡಯಟೆಟಿಕ್ಸ್ ಅಸೋಸಿಯೇಶನ್‌ನ ಬೆಂಗಳೂರು ಚಾಪ್ಟರ್ ಅಧ್ಯಕ್ಷೆ ಹಾಗೂ ಮೌಂಟ್ ಕಾರ್ಮೆಲ್ ಕಾಲೇಜು (ಸ್ವಾಯತ್ತ) ಸಹಾಯಕ ಪ್ರಾಧ್ಯಾಪಕಿ ಡಾ| ಗೀತಾ ಸಂತೋಷ್, ಸಮ್ಮೇಳನ ಆಯೋಜನ ಸಮಿತಿ ಕಾರ್ಯದರ್ಶಿ ಸೆಲ್ಲಿ ಜೆ. ಕಟ್ಟಿಕಾರನ್, ಜತೆ ಕಾರ್ಯದರ್ಶಿ ಡಾ| ಪ್ರೇರಣಾ ಹೆಗ್ಡೆ ಉಪಸ್ಥಿತರಿದ್ದರು.
Related Articles
Advertisement