Advertisement
ಪಟ್ಟಣದ ಒಂದನೇ ವಾರ್ಡ್‌ನ ಅಂಗನವಾಡಿ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ಮಕ್ಕಳ ತಾಯಂದಿರ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕೋವಿಡ್-19 ಹಿನ್ನೆಲೆಯಲ್ಲಿ ಮಕ್ಕಳು ಹಾಗೂ ಬಾಣಂತಿಯರು ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸಬೇಕು. ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಪೌಷ್ಟಿಕಾಂಶಯುಕ್ತ ಆಹಾರ ಸೇವನೆಗೆ ಒತ್ತು ನೀಡಬೇಕು. ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳು ಕಂಡು ಬಂದಲ್ಲಿ ತಕ್ಷಣ ಸ್ಥಳೀಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು. ಸಿಡಿಪಿಒ ಇಲಾಖೆ ಮಕ್ಕಳಿಗೆ ಹಾಗೂ ಬಾಣಂತಿಯರಿಗೆ ನೀಡುತ್ತಿರುವ ಆಹಾರ ಧಾನ್ಯ ಕಳಪೆಯಾಗಿದೆ ಎನ್ನುವ ದೂರುಗಳಿವೆ. ಪೌಷ್ಟಿಕಾಂಶಯುಕ್ತ ಆಹಾರದಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕೆಂದು ತಿಳಿಸಿದರು.
Advertisement
ಮಕ್ಕಳ ಬೆಳವಣಿಗೆಗೆ ಪೌಷ್ಟಿಕ ಆಹಾರ ಮುಖ್ಯ
05:24 PM Sep 29, 2020 | Suhan S |
Advertisement
Udayavani is now on Telegram. Click here to join our channel and stay updated with the latest news.