Advertisement
ರಾಜಭವನದ ಗಾಜಿನ ಮನೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಹುಕ್ಕೇರಿ ಶಾಸಕ ಉಮೇಶ್ ಕತ್ತಿ ಅವರು ಮೊದಲನೆಯವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಅವರು ಮೂರನೇ ಬಾರಿಗೆ ಮಂತ್ರಿ ಪದವಿಗೇರಿದರು.
Related Articles
Advertisement
ಬಾಗಲಕೋಟೆ ಜಿಲ್ಲೆಯ ಬೀಳಗಿ ಕ್ಷೇತ್ರದ ಶಾಸಕ ಮುರುಗೇಶ್ ನಿರಾಣಿ ಅವರಿಗೆ ರಾಜ್ಯಪಾಲರು ಪ್ರತಿಜ್ಞಾವಿಧಿ ಬೋಧಿಸಿದರು. ದೇವರು, ರೈತರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಅವರು ನಂತರ ರಾಜ್ಯಪಾಲರು ಮತ್ತು ಸಿಎಂ ಯಡಿಯೂರಪ್ಪ ಕಾಲು ಮುಟ್ಟಿ ನಮಸ್ಕರಿಸಿದರು.
ವಿಧಾನ ಪರಿಷತ್ ಸದಸ್ಯ ಆರ್ ಶಂಕರ್ ಅವರು ಬಿಎಸ್ ವೈ ಸಂಪುಟದ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಆರ್.ಶಂಕರ್ ಅವರು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ನಂತರ ರಾಜ್ಯಪಾಲರು ಮತ್ತು ಮುಖ್ಯಮಂತ್ರಿಗಳ ಕಾಲು ಮುಟ್ಟಿ ನಮಸ್ಕರಿಸಿದರು.
ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಅವರು ಎರಡನೇ ಬಾರಿಗೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಅವರು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಸುಳ್ಯ ಶಾಸಕ ಎಸ್.ಅಂಗಾರ ಅವರು ಮೊದಲ ಬಾರಿಗೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಎಸ್.ಅಂಗಾರ ಅವರು ವೇದಿಕೆ ಹತ್ತುತ್ತಿದ್ದಂತೆ ಬಿಜೆಪಿ ರಾಷ್ಟ್ರಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಚಪ್ಪಾಳೆ ತಟ್ಟಿ ಸಂತಸ ವ್ಯಕ್ತಪಡಿಸಿದರು.