Advertisement

ರಾಜ್ಯ ಹೈಕೋರ್ಟ್ ಹೆಚ್ಚುವರಿ ನ್ಯಾಯಮೂರ್ತಿಗಳ ಪ್ರಮಾಣವಚನ ಸ್ವೀಕಾರ

10:29 PM Aug 16, 2022 | Team Udayavani |

ಬೆಂಗಳೂರು: ರಾಜ್ಯ ಹೈಕೋರ್ಟ್‌ಗೆ ಹೊಸದಾಗಿ ನೇಮಕಗೊಂಡಿರುವ ಐವರು ಹೆಚ್ಚುವರಿ ನ್ಯಾಯಮೂರ್ತಿಗಳು ಮಂಗಳವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

Advertisement

ರಾಜಭವನದ ಗಾಜಿನ ಮನೆಯ ಆವರಣದಲ್ಲಿ ನಡೆದ ಸಮಾರಂಭದಲ್ಲಿ ನ್ಯಾಯಮೂರ್ತಿಗಳಾಗಿ ಪದೋನ್ನತಿ ಪಡೆದಿರುವ ನ್ಯಾ| ಅನಿಲ್‌ ಭೀಮಸೇನ ಕಟ್ಟಿ, ನ್ಯಾ| ಗುರುಸಿದ್ದಯ್ಯ ಬಸವರಾಜ, ನ್ಯಾ| ಚಂದ್ರಶೇಖರ ಮೃತ್ಯುಂಜಯ ಜೋಶಿ, ನ್ಯಾ| ಉಮೇಶ ಮಂಜುನಾಥ ಭಟ್ಟ ಅಡಿಗ ಹಾಗೂ ನ್ಯಾ| ತಲಕಾಡು ಗಿರಿಗೌಡ ಶಿವಶಂಕರೇಗೌಡ ಅವರಿಗೆ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್ ಅಧಿಕಾರ ಗೌಪ್ಯತಾ ಪ್ರಮಾಣ ವಚನ ಬೋಧಿಸಿದರು. ಈ ಐವರ ಪದೋನ್ನತಿಯಿಂದ ಹೈಕೋರ್ಟ್‌ ನ್ಯಾಯಮೂರ್ತಿಗಳ ಸಂಖ್ಯೆ 48ಕ್ಕೆ ಏರಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್‌ ಆರಾಧೆ ಸೇರಿ ಶಾಸಕರು, ಹೈಕೋರ್ಟ್‌ ನ್ಯಾಯಮೂರ್ತಿಗಳು, ವಕೀಲರು ಉಪಸ್ಥಿತರಿದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next