Advertisement

ನೀರಿನ ಸಮಸ್ಯೆ: ಎಚ್ಚೆತ್ತ ಬರ ನಿರ್ವಹಣೆ ಸಮಿತಿ

11:55 AM May 05, 2019 | Team Udayavani |

ಔರಾದ: ಪಟ್ಟಣ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಉಲ್ಭಣವಾದ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಬರ ನಿರ್ವಹಣೆ ಸಮಿತಿ ಸದಸ್ಯರು ಹಾಗೂ ಅಧ್ಯಕ್ಷರು ಜಾಗೃತರಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಸಹಾಯಕ ಆಯುಕ್ತ ಡಾ|ಶಂಕರ ವಣಕ್ಯಾಳ ಸೂಚನೆ ನೀಡಿದರು.

Advertisement

ಪಟ್ಟಣದ ತಹಶೀಲ್ದಾರ ಕಚೇರಿ ಆವರಣದಲ್ಲಿ ಶನಿವಾರ ನಡೆದ ಬರ ನಿರ್ವಹಣೆ ಸಮಿತಿ ಸದಸ್ಯರು ಹಾಗೂ

ಅಧ್ಯಕ್ಷರ ಸಭೆಯಲ್ಲಿ ಮಾತನಾಡಿದ ಅವರು, ಪಟ್ಟಣ ಸೇರಿದಂತೆ ಗ್ರಾಮೀಣ ಭಾಗದಲ್ಲಿ ದಿನದಿಂದ ದಿನಕ್ಕೆ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗುತ್ತಿದೆ. ಬರ ನಿರ್ವಹಣೆ ಸಮಿತಿ ಸದಸ್ಯರು ಜಾಗೃತಿಯಿಂದ ಕಾರ್ಯನಿರ್ವಹಿಸುವ ಮೂಲಕ ಜನರ ಸಮಸ್ಯೆಗೆ ಸ್ಪಂದಿಸಲು ಮುಂದಾಗಬೇಕು ಎಂದು ಸಲಹೆ ನೀಡಿದರು.

ಬರ ನಿರ್ವಹಣೆ ಸಮಿತಿ ಪ್ರತಿಯೊಬ್ಬ ಅಧಿಕಾರಿಯು ತಮ್ಮ ಕೇಂದ್ರಸ್ಥಾನದಲ್ಲಿ ಉಳಿದುಕೊಂಡು ಜನರಿಗೆ ನೀರು ಸೇರಿದಂತೆ ಇನ್ನಿತರ ಸಮಸ್ಯೆಗಳು ಬಾರದಂತೆ ಕರ್ತವ್ಯ ನಿರ್ವಹಿಸಲು ಮುಂದಾಗಬೇಕು. ಇಲ್ಲವಾದಲ್ಲಿ ಸಬ್ಬಂಧಿಸಿದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಖಡಕ್‌ ಎಚ್ಚರಿಕೆ ನೀಡಿದರು.

ಪಟ್ಟಣದಲ್ಲಿ ಕುಡಿಯುವ ನೀರಿನ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಪಟ್ಟಣ ಪಂಚಾಯತ ಮುಖ್ಯಾಧಿಕಾರಿಗಳು ಹಾಗೂ ತಹಶೀಲ್ದಾರ ಮತ್ತು ಗ್ರಾಮ ಲೆಕ್ಕಾಧಿಕಾರಿಗಳು ಯಾಕೆ ಸೋಮಾರಿತನ ಮಾಡುತ್ತಿದ್ದೀರಿ? ಜನರ ನೋವು ನಿಮಗೆ ಕೇಳಿಸುತ್ತಿಲ್ಲವೇ ಎಂದು ಪ್ರಶ್ನಿಸಿದರು.

Advertisement

ಇಂತಹ ಘಟನೆ ತಾಲೂಕಿನಲ್ಲಿ ಇನ್ನೊಮ್ಮೆ ನಡೆಯದಂತೆ ನೋಡಿಕೊಳ್ಳಬೇಕು. ಸಮಸ್ಯೆ ತಿಳಿದ ತಕ್ಷಣವೇ ಬಗೆ ಹರಿಸುವ ಪ್ರಮಾಣಿಕ ಪ್ರಯತ್ನ ಮಾಡಬೇಕು. ಗ್ರಾಮೀಣ ಭಾಗದಲ್ಲಿನ ಬರ ನಿರ್ವಹಣೆ ಸಮಿತಿ ಸದಸ್ಯರು ತಮ್ಮ ಗ್ರಾಪಂ ವ್ಯಾಪ್ತಿಯ ಪ್ರತಿಯೊಂದು ಗ್ರಾಮಕ್ಕೂ ಎರಡು ದಿನಕೊಮ್ಮೆ ಭೇಟಿ ನೀಡಿ ಅಲ್ಲಿನ ಸಮಸ್ಯೆಗಳು ಆಲಿಸಿ ಬಗೆಹರಿಸಲು ಮುಂದಾಗಬೇಕು. ಗ್ರಾಮದಲ್ಲಿಯೇ ವಾಸವಾಗಿರುವ ಆಶಾ ಕಾರ್ಯಕರ್ತರನ್ನು ಪಿಡಿಒ ವಿಶ್ವಾಸ‌ಕ್ಕೆ ತೆಗೆದುಕೊಂಡು ಕರ್ತವ್ಯ ನಿರ್ವಹಿಸಲುವ ಮೂಲಕ ಸಾರ್ವಜನಿಕ ಸಮಸ್ಯೆಗೆ ಸ್ಪಂದಿಸಬೇಕು. ಗ್ರಾಮೀಣ ಭಾಗದ ರೈತರು ಹಾಗೂ ಕೂಲಿ ಕಾರ್ಮಿಕರು ದುಡಿಯಲು ಕೈಯಲ್ಲಿ ಕೆಲಸವಿಲ್ಲ ಎಂದು ಪಟ್ಟಣ ಹಾಗೂ ನಗರ ಪ್ರದೇಶಕ್ಕೆ ಕೆಲಸಕ್ಕಾಗಿ ಗುಳೆ ಹೋಗುವ ವಿಚಾರದಲ್ಲಿದ್ದಾರೆ. ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೆಲಸ ನೀಡಬೇಕು. ಕೆಲಸದ ಬಗ್ಗೆ ಪ್ರತಿ ಗ್ರಾಮದಲ್ಲಿಯೂ ಡಂಗುರ ಸಾರುವಂತೆ ತಾಕೀತು ಮಾಡಿದರು.

ವಾರ್ಡ್‌ಗೆ ಭೇಟಿ: ಅಧಿಕಾರಿಗಳ ಸಭೆ ಮುಗಿದ ಬಳಿಕ ಪಟ್ಟಣದ ಕನಕ ಬಡಾವಣೆ, ಬಸವನಗಲ್ಲಿ ಸೇರಿದಂತೆ ಇನ್ನಿತರ ವಾರ್ಡ್‌ಗಳಿಗೆ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ನಿವಾಸಿಗಳು ಎದುರಿಸುತ್ತಿರುವ ನೀರಿನ ಸಮಸ್ಯೆ ಅರಿತುಕೊಂಡು ಬಗೆಹರಿಸುವ ಬಗ್ಗೆ ಭರವಸೆ ನೀಡಿದರು.

ಪಟ್ಟಣ ಪಂಚಾಯತ ಅಧಿಕಾರಿಗಳು ಮತ್ತು ತಹಶೀಲ್ದಾರ್‌ಗೆ ಬಡಾವಣೆಯಲ್ಲಿನ ನೀರಿನ ಸಮಸ್ಯೆ ಬಗೆಹರಿಸುವಂತೆ ಹಲವು ಬಾರಿ ಮನವಿ ಮಾಡಿಕೊಂಡರು ಕೂಡ ಯಾವುದೇ ಪ್ರಯೋಜನವಾಗಿಲ್ಲ. ನೀವು ಅವರಂತೆ ಸುಳ್ಳು ಭರವಸೆ ನೀಡಿ ಹೋಗಬೇಡಿ. ನಮಗೆ ಕುಡಿಯಲು ನೀರಿನ ವ್ಯವಸ್ಥೆ ಮಾಡಿಕೊಡಿ ಎಂದು ಗುಂಡಪ್ಪ ಮುದಾಳೆ ವಿನಂತಿಸಿದಾಗ, ನಮ್ಮ ಮೇಲೆ ನಂಬಿಕೆ ಇಡಿ. ನಿಮ್ಮ ವಾರ್ಡ್‌ಗೆ ನೀರು ಬಾರದೆ ಇದ್ದಲ್ಲಿ ನನ್ನ ದೂರವಾಣಿ ಸಂಖ್ಯೆಗೆ ಕರೆ ಮಾಡಿ ಎಂದು ದೂರವಾಣಿ ಸಂಖ್ಯೆ ನೀಡಿದರು.

ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿನ ಮೇವು ಕೇಂದ್ರಕ್ಕೆ ಹಾಕಲಾಗಿದ್ದ ಬೀಗವನ್ನು ಅಧಿಕಾರಿಗಳು ಶನಿವಾರ ತೆಗೆದಿದ್ದಾರೆ. ಆದರೆ ಅದರಲ್ಲಿ ಮೇವು ಇಲ್ಲದೆ ಇರುವುದರಿಂದ ರೈತರು ಹಾಗೂ ಮೇವು ಬೇಕಾಗುವ ಜನರು ಮೇವು ವಿತರಣಾ ಕೆಂದ್ರಕ್ಕೆ ಬಂದು ಹೋಗುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next