Advertisement

ಆದಿಯೋಗಿ ಪ್ರತಿಮೆ ಸ್ಥಾಪನೆಗೆ ಆಕ್ಷೇಪ: ಅರ್ಜಿ ವಜಾ

11:09 PM Feb 09, 2023 | Team Udayavani |

ಬೆಂಗಳೂರು: ಚಿಕ್ಕಬಳ್ಳಾ ಪುರದ ಅವಲಗುರ್ಕಿ ಗ್ರಾಮದ ನಂದಿ ಬೆಟ್ಟದ ಪರಿಸರದಲ್ಲಿ ಆದಿಯೋಗಿ ಪ್ರತಿಮೆ ನಿರ್ಮಾಣ ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ.

Advertisement

ಪ್ರತಿಮೆ ಸ್ಥಾಪನೆ ಆಕ್ಷೇಪಿಸಿ ಚಿಕ್ಕಬಳ್ಳಾಪುರ ತಾಲೂಕಿನ ಚಂಬಳ್ಳಿ ನಿವಾಸಿ ಎಸ್‌. ಕ್ಯಾತಪ್ಪ ಮತ್ತಿತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾ| ಪಿ.ಬಿ. ವರಾಲೆ ಹಾಗೂ ನ್ಯಾ. ಅಶೋಕ್‌ ಎಸ್‌. ಕಿಣಗಿ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು.

ಈ ವೇಳೆ ಈಶಾ ಪೌಂಡೇಷನ್‌ ಪರ ಹಿರಿಯ ವಕೀಲ ಉದಯ್‌ ಹೊಳ್ಳ ಅವರು ವಾದ ಮಂಡಿಸಿ, ಅರ್ಜಿಯಲ್ಲಿ ಅರ್ಜಿದಾರರ ಕ್ರಿಮಿನಲ್‌ ಹಿನ್ನೆಲೆಯನ್ನು ತಿಳಿಸಿಲ್ಲ. ವಾಸ್ತವ ಸಂಗತಿಗಳನ್ನು ಮರೆಮಾಚಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.  ಪಿಐಎಲ್‌ ಸಲ್ಲಿಸಲು ಪಾಲಿಸಬೇಕಾದ ನಿಯಮಗಳನ್ನು ಉಲ್ಲಂ ಸಿ ಅರ್ಜಿ ಸಲ್ಲಿಸಲಾಗಿದೆ ಎಂದು ನ್ಯಾಯಪೀಠದ ಗಮನಕ್ಕೆ ತಂದರು.

Advertisement

Udayavani is now on Telegram. Click here to join our channel and stay updated with the latest news.

Next