Advertisement
ನ್ಯಾ.ನಾಗಮೋಹನ್ ದಾಸ್ ನೇತೃತ್ವದ ತಜ್ಞರ ಸಮಿತಿ ಸಲ್ಲಿಸಿರುವ ವರದಿ ಕುರಿತು ಆಯೋಗದ ಸಭೆಯಲ್ಲಿ ಚರ್ಚಿಸಲಾಗಿದ್ದು, ಬಹುತೇಕ ಸದಸ್ಯರು ಲಿಂಗಾಯತ ಸಮುದಾಯಕ್ಕೆ ಅಲ್ಪಸಂಖ್ಯಾತ ಮಾನ್ಯತೆ ನೀಡುವ ಕುರಿತು ವಿರೋಧ ವ್ಯಕ್ತಪಡಿಸಿದ್ದಾರೆನ್ನಲಾಗಿದೆ. ಆಕ್ಷೇಪದ ಅಭಿಪ್ರಾಯದೊಂದಿಗೆ ಆಯೋಗವು ಮಂಗಳವಾರ ಸರ್ಕಾರಕ್ಕೆ ವರದಿ ಸಲ್ಲಿಸಿದೆ ಎಂದು ಹೇಳಲಾಗಿದೆ.
Related Articles
Advertisement
ದಲಿತರಿಗೆ ಜನ ಸಂಖ್ಯೆ ಆಧಾರದಲ್ಲಿ ನೀಡುತ್ತಿರುವ ಮೀಸಲಾತಿಯಂತೆ ಅಲ್ಪ ಸಂಖ್ಯಾತರಿಗೂ ಜನ ಸಂಖ್ಯೆ ಆಧಾರದಲ್ಲಿ ಮೀಸಲಾತಿ ನೀಡಬೇಕು. ವಿಶೇಷವಾಗಿ ಮುಸ್ಲಿಂ ಸಮುದಾಯಕ್ಕೆ ಕನಿಷ್ಠ ಶೇ.10ರಷ್ಟು ಮೀಸಲಾತಿ ನೀಡಬೇಕೆಂಬ ಬೇಡಿಕೆ ಕೇಳಿ ಬಂದಿದೆಯಂತೆ.
ಮೂಲಗಳ ಪ್ರಕಾರ ಸಿಎಂ ಸಿದ್ದರಾಮಯ್ಯ ಮೀಸಲಾತಿ ಪ್ರಮಾಣ ಹೆಚ್ಚಳ ಮಾಡುವ ಪ್ರಸ್ತಾಪವನ್ನು ಈ ಬಾರಿ ಕೈ ಬಿಟ್ಟಿದ್ದು, ಮುಂದಿನ ಬಾರಿ ಕಾಂಗ್ರೆಸ್ ಸರ್ಕಾರ ಬಹುಮತ ಪಡೆದು ಅಧಿಕಾರಕ್ಕೆ ಬಂದರೆ, ಮೀಸಲಾತಿ ಪ್ರಮಾಣ ಹೆಚ್ಚಳ ಮಾಡುವ ಇಂಗಿತ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಬುಧವಾರ ನಡೆಯುವ ಸಂಪುಟ ಸಭೆಯಲ್ಲಿ ಆಯೋಗದ ವರದಿ ಕುರಿತು ಪ್ರಮುಖವಾಗಿ ಚರ್ಚೆ ನಡೆಯಲಿದ್ದು, ಬಹುತೇಕ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.
ಆಯೋಗಕ್ಕೆ ಕಳುಹಿಸಲು ಶಿಫಾರಸು: ತಜ್ಞರ ಸಮಿತಿ ಲಿಂಗಾಯತ ಸಮುದಾಯಕ್ಕೆ ಪ್ರತ್ಯೇಕ ಧರ್ಮದ ಮಾನ್ಯತೆ ನೀಡುವ ಕುರಿತು ಕೇಂದ್ರ ಅಲ್ಪ ಸಂಖ್ಯಾತ ಆಯೋಗಕ್ಕೆ ಕಳುಹಿಸಿ ಒಪ್ಪಿಗೆ ಪಡೆಯಬೇಕೆಂದು ವರದಿಯಲ್ಲಿ ತಿಳಿಸಿದೆ. ಆದರೆ, ಕೇಂದ್ರ ಅಲ್ಪ ಸಂಖ್ಯಾತ ಆಯೋಗದ ಒಪ್ಪಿಗೆ ಪಡೆಯಬೇಕೆಂದು ಸರ್ಕಾರಕ್ಕೆ ಶಿಫಾರಸು ಮಾಡಿದೆ ಎಂದು ತಿಳಿದು ಬಂದಿದೆ.
* ಶಂಕರ ಪಾಗೋಜಿ