Advertisement

Karnataka Election ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ಪೋಸ್ಟ್: ಪೊಲೀಸ್ ನಿಗಾ

04:07 PM Apr 07, 2023 | Team Udayavani |

ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ಬರವಣಿಗೆ, ಪೋಸ್ಟ್‌ ಗಳನ್ನು ಹಾಕುವ ಬಗ್ಗೆ ಜಿಲ್ಲಾ ಚುನಾವಣಾಧಿಕಾರಿ, ಜಿಲ್ಲಾ ಪೊಲೀಸ್, ಪುತ್ತೂರು ಮತ್ತು ಬಂಟ್ವಾಳ ಪೊಲೀಸ್ ಉಪಾಧೀಕ್ಷಕರ ಕಚೇರಿಗಳಲ್ಲಿ ಸಾಮಾಜಿಕ ಜಾಲತಾಣ ನಿಗಾ ಘಟಕ ಕಾರ್ಯ ನಿರ್ವಹಿಸುತ್ತಿದ್ದು, ಕಾನೂನುಬಾಹಿರ ಪೋಸ್ಟ್‌ಗಳನ್ನು ಪ್ರಸಾರ ಮಾಡುವುದು ಕಂಡುಬಂದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

Advertisement

ಸಾಮಾಜಿಕ ಜಾಲತಾಣಗಲಲ್ಲಿ ಚುನಾವಣ ನೀತಿ ಸಂಹಿತೆ ಉಲ್ಲಂಘನೆ ಆಗುವಂತಹ ಪೋಸ್ಟ್‌ಗಳನ್ನು ಹಾಕುವುದು ಕಾನೂನಿನ ಪ್ರಕಾರ ಶಿಕ್ಷಾರ್ಹ ಅಪರಾಧ. ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷ ಹರಡುವ ಸುದ್ದಿ, ಸುಳ್ಳುಸುದ್ದಿ, ಅಶ್ಲೀಲ- ಅಸಭ್ಯ ವಿಷಯಗಳನ್ನು ಒಳಗೊಂಡು ಪೋಸ್ಟ್ ಹಾಕುವುದು ಕೂಡಾ ಶಿಕ್ಷಾರ್ಹ ಅಪರಾಧವಾಗಿರುತ್ತದೆ. ಯಾವುದೇ ವ್ಯಕ್ತಿಗಳ ಚಾರಿತ್ರ್ಯಹರಣ, ಮಾನಹಾನಿ ಮಾಡುವಂತಹ ಪೋಸ್ಟ್‌ ಗಳನ್ನು ಹಾಕುವುದು ಅಪರಾಧವಾಗಿದ್ದು, ಇಂತಹ ಪೋಸ್ಟ್‌ಗಳ ಮೇಲೆ ನಿಗಾ ವಹಿಸಲಾಗುತ್ತಿದೆ ಎಂದು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ:Kiccha sudeepa ನಟನೆಯ ಶೋ, ಭಾವಚಿತ್ರಗಳನ್ನು ತಡೆ ಹಿಡಿಯಬೇಕು: ಜೆಡಿಎಸ್ ದೂರು

ರಾಜ್ಯದಲ್ಲಿ ಮೇ.10ರಂದು ವಿಧಾನಸಭಾ ಚುನಾವಣೆ ನಡೆಯಲಿದ್ದು, ಮೇ.13ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.

Advertisement

Udayavani is now on Telegram. Click here to join our channel and stay updated with the latest news.

Next