Advertisement

Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು

11:32 PM Nov 25, 2024 | Team Udayavani |

ಬೆಂಗಳೂರು: ಹಿಂದೂ ದೇವತೆಗಳ ಬಗ್ಗೆ ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಅಶ್ಲೀಲ ಪದ ಬಳಸಿ ಕಮೆಂಟ್‌ ಹಾಕಿರುವ ಕಿಡಿಗೇಡಿ ವಿರುದ್ಧ ಕಾನೂನು ಕ್ರಮಕೈಗೊಳ್ಳುವಂತೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಪೊಲೀಸ್‌ ಠಾಣೆ ಮೆಟ್ಟಿಲೇರಿದೆ.

Advertisement

ಅಖೀಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಉಪಾಧ್ಯಕ್ಷ ಬಿ.ಎಸ್‌.ರಾಘವೇಂದ್ರ ಭಟ್‌ ನೀಡಿದ ದೂರಿನ ಮೇರೆಗೆ ಮಹಾಲಕ್ಷ್ಮಿ ಲೇಔಟ್‌ ಠಾಣೆ ಪೊಲೀಸರು ಅಂಜುಂ ಶೇಕ್‌ ಎಂಬಾತನ ವಿರುದ್ಧ ಎಫ್ಐಆರ್‌ ದಾಖಲಿಸಿಕೊಂಡಿದ್ದಾರೆ.

ಫೇಸ್‌ಬುಕ್‌ನಲ್ಲಿ ಅನ್ಯಕೋಮಿಗೆ ಸೇರಿದ ಅಂಜುಂ ಶೇಕ್‌ ಎಂಬಾತ ಶೃಂಗೇರಿ ಶಾರದಾಂಬೆ, ಕೊಲ್ಲೂರು ಮೂುಕಾಂಬಿಕೆ, ತಿರುಪತಿ ತಿಮ್ಮಪ್ಪ, ಹೊರನಾಡು ಅನ್ನಪೂರ್ಣೇಶ್ವರಿ, ಕಟೀಲು ದುರ್ಗಾಪರಮೇಶ್ವರಿ ಮತ್ತು ಗಣಪತಿ ದೇವರ ಬಗ್ಗೆ ಅಶ್ಲೀಲ ಪದ ಬಳ ಸಿ ಕಮೆಂಟ್‌ ಮಾಡಿದ್ದಾನೆ. ಅದರಿಂದ ಹಿಂದೂಗಳ ಭಾವನೆಗಳಿಗೆ ಧಕ್ಕೆ ಉಂಟಾಗಿದೆ ಎಂದು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next