Advertisement

ಇನ್‌ಸ್ಟಾಗ್ರಾಂನಲ್ಲಿ ಹಿಂದೂ ದೇವರ ಬಗ್ಗೆ ಅಶ್ಲೀಲ ಕಮೆಂಟ್‌: ಆರೋಪಿ ಬಂಧನ

10:14 PM Aug 03, 2023 | Team Udayavani |

ಮಂಗಳೂರು: ಇನ್‌ಸ್ಟಾಗ್ರಾಂನಲ್ಲಿ ಹಿಂದೂ ದೇವರ ಬಗ್ಗೆ ಅಶ್ಲೀಲವಾಗಿ ಬರೆದು ಕಾಮೆಂಟ್‌ ಹಾಕಿದ್ದ ಆರೋಪಿಯನ್ನು ಸೆನ್‌ ಕ್ರೈಂ ಪೊಲೀಸರು ಬಂಧಿಸಿದ್ದಾರೆ.
ಬಿಕರ್ನಕಟ್ಟೆ ಮಸೀದಿ ಹಿಲ್‌ ರೋಡ್‌ ನಿವಾಸಿ ಮೊಹಮ್ಮದ್‌ ಸಲ್ಮಾನ್‌ (22) ಬಂಧಿತ ಆರೋಪಿ. ಹಿಂದೂ ದೇವರ ಬಗ್ಗೆ ಅಶ್ಲೀಲವಾಗಿ ಬರೆದ ಈತನ ವಿರುದ್ಧ ಸೆನ್‌ ಠಾಣೆಯಲ್ಲಿ ದೂರು ದಾಖಲಾಗಿತ್ತು. ಆರೋಪಿಯನ್ನು 7ನೇ ಜೆಎಂಎಫ್ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

Advertisement

ಪೊಲೀಸ್‌ ಆಯುಕ್ತ ಕುಲದೀಪ್‌ ಕುಮಾರ್‌ ಜೈನ್‌ ಅವರ ಮಾರ್ಗದರ್ಶನದಲ್ಲಿ, ಮಂಗಳೂರು ನಗರ ಸೆನ್‌ ಕ್ರೈಂ ಪೊಲೀಸ್‌ ಠಾಣೆಯ ಪೊಲೀಸ್‌ ಇನ್‌ಸ್ಪೆಕ್ಟರ್‌ ಸತೀಶ್‌ ಎಂ.ಪಿ. ನೇತೃತ್ವದಲ್ಲಿ ಠಾಣೆಯ ಅಧಿಕಾರಿ ಮತ್ತು ಸಿಬಂದಿಯವರು ಆರೋಪಿಯನ್ನು ಬಂಧಿಸುವ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

 

Advertisement

Udayavani is now on Telegram. Click here to join our channel and stay updated with the latest news.

Next