Advertisement

Oct. 21 ರಂದು “ಕುಡ್ಲದ ಪಿಲಿಪರ್ಬ 2023”

12:34 AM Oct 19, 2023 | Team Udayavani |

ಮಂಗಳೂರು: ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಅ. 21ರಂದು ಬೆಳಗ್ಗೆ 10ರಿಂದ ಮಂಗಳೂರಿನ ಕೇಂದ್ರ ಮೈದಾನದಲ್ಲಿ ದ್ವಿತೀಯ ವರ್ಷದ “ಕುಡ್ಲದ ಪಿಲಿಪರ್ಬ- 2023′ ನಡೆಯಲಿದೆ ಎಂದು ಶಾಸಕ ಡಿ. ವೇದವ್ಯಾಸ ಕಾಮತ್‌ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

Advertisement

ಸಂಸದ ನಳಿನ್‌ ಕುಮಾರ್‌ ಕಟೀಲು ಉದ್ಘಾಟಿಸಲಿದ್ದಾರೆ. ಮೇಯರ್‌ ಸುಧೀರ್‌ ಶೆಟ್ಟಿ ಕಣ್ಣೂರು ಸಹಿತ ಅಧಿಕಾರಿಗಳು ಭಾಗವಹಿಸಲಿದ್ದಾರೆ. ತುಳುನಾಡಿನ ಪರಂಪರೆಯ ಹುಲಿ ವೇಷ ಕುಣಿತಕ್ಕೆ ರಾಷ್ಟ್ರ ಮಟ್ಟದಲ್ಲಿ ಮಾನ್ಯತೆ ದೊರಕಿಸುವ ಮತ್ತು ಈ ಕಲಾ ಶ್ರೇಷ್ಠತೆಯನ್ನು ಮುಂದಿನ ತಲೆಮಾರಿಗೆ ದಾಟಿಸುವ ಉದ್ದೇಶದಿಂದ ಕುಡ್ಲದ ಪಿಲಿಪರ್ಬ ಆಯೋಜಿಸಲಾಗಿದೆ ಎಂದರು.

ಭವ್ಯ ಹಾಗೂ ವಿಶಾಲ ವೇದಿಕೆಯಲ್ಲಿ, ಜಿಲ್ಲೆಯ ಪರಿಣಿತ ತೀರ್ಪುಗಾರರ ಸಮ್ಮುಖದಲ್ಲಿ ಸ್ಪರ್ಧೆ ನಡೆಯಲಿದೆ. ಪಂದ್ಯ, ಫಲಿತಾಂಶಗಳ ನಿಖರತೆ ಪಡೆಯುವ ಉದ್ದೇಶಕ್ಕೆ ಈ ಬಾರಿ ಥರ್ಡ್‌ ಅಂಫೈರ್‌ ಇರಲಿದ್ದಾರೆ. ಈ
ಸಂಭ್ರಮದಲ್ಲಿ ಪಾಲ್ಗೊಳ್ಳಲು ಪ್ರತಿ ಯೊಬ್ಬರಿಗೂ ಮುಕ್ತ ಅವಕಾಶವಿದೆ. ಹುಲಿವೇಷ ತಂಡಗಳಿಂದ ಇಡೀ ದಿನ ಮನೋರಂಜನೆ ದೊರಕಲಿದೆ ಎಂದರು.

ಸುಸಜ್ಜಿತ ಗ್ಯಾಲರಿ
ಹುಲಿವೇಷ ತಂಡಗಳು ಮೆರವಣಿ ಗೆಯ ಮೂಲಕ ವೇದಿಕೆಯನ್ನು ಪ್ರವೇಶಿಸಲಿದ್ದು, 20 ನಿಮಿಷಗಳ ಪ್ರದರ್ಶನ ನೀಡಲಿವೆ. ಪ್ರತೀ ತಂಡವೂ 38 ಕೆ.ಜಿ. ಭಾರದ ಅಕ್ಕಿಮುಡಿ ಹಾರಿಸುವುದು ಕಡ್ಡಾಯ. ಕರಿಹುಲಿಗಳು, ಮರಿಹುಲಿಗಳು, ಹಿಮ್ಮೇಳ, ಧರಣಿ ಮಂಡಲ ಹೀಗೆ ಇಡೀ ಕೂಟವು ವೈವಿಧ್ಯದಿಂದ ಕೂಡಿರಲಿದೆ. ಮೈದಾನದಲ್ಲಿ 5 ಸಾವಿರ ಮಂದಿ ಕುಳಿತು ವೀಕ್ಷಿಸಬಹುದಾದ ಸುಸಜ್ಜಿತ ಪ್ರೇಕ್ಷಕರ ಗ್ಯಾಲರಿ ನಿರ್ಮಿಸಲಾಗಿದೆ. ದೊಡ್ಡ ಪರದೆಯ ವ್ಯವಸ್ಥೆಯೂ ಇದೆ. ಮೈದಾನದಲ್ಲೇ ವಾಹನ ನಿಲುಗಡೆ ವ್ಯವಸ್ಥೆ ಕಲ್ಪಿಸಲಾಗಿದೆ. ಕಳೆದ ಬಾರಿಯ ಪಿಲಿಪರ್ಬದಲ್ಲಿ 12 ತಂಡಗಳು ಭಾಗಿಯಾಗಿದ್ದವು. ಈ ಬಾರಿ 15 ಪ್ರಸಿದ್ಧ ತಂಡಗಳು ಪಾಲ್ಗೊಳ್ಳಲಿವೆ ಎಂದು ವಿವರಿಸಿದರು.

ಪ್ರತಿಷ್ಠಾನದ ಗೌರವಾಧ್ಯಕ್ಷ ಗಿರಿಧರ ಶೆಟ್ಟಿ, ಅಧ್ಯಕ್ಷ, ಮಾಜಿ ಮೇಯರ್‌ ದಿವಾಕರ ಪಾಂಡೇಶ್ವರ, ಪ್ರಮುಖರಾದ ಚೇತನ್‌ ಕಾಮತ್‌, ಜಗದೀಶ್‌ ಕದ್ರಿ, ಲಲಿತ್‌ ರಾಜ್‌ ಮೆಂಡನ್‌, ಅಶ್ವಿ‌ತ್‌ ಕೊಟ್ಟಾರಿ, ಸೂರಜ್‌ ಕಾಮತ್‌, ಉದಯ ಪೂಜಾರಿ, ಕಿರಣ್‌ ಶೆಣೈ ಪತ್ರಿಕಾಗೋಷ್ಠಿಯಲ್ಲಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next