Advertisement

Adichunchanagiri ಅ.26 ರಿಂದ ಪಾರಂಪರಿಕ ವೈದ್ಯರ ಸಮ್ಮೇಳನ

10:13 PM Oct 22, 2023 | Team Udayavani |

ಕುದೂರು: ನಾಗಮಂಗಲ ತಾಲೂಕು ಆದಿಚುಂಚನಗಿರಿ ಮಠದಲ್ಲಿ ಅ.26ರಿಂದ 3 ದಿನಗಳ ಕಾಲ ಪಾರಂಪರಿಕ ವೈದ್ಯರ ರಾಷ್ಟ್ರೀಯ ಮತ್ತು 14ನೇ ರಾಜ್ಯ ಸಮ್ಮೇಳನವನ್ನು ಆಯೋಜಿಸಲಾಗಿದೆ.

Advertisement

ಆದಿ ಚುಂಚನಗಿರಿ ಮಹಾ ಸಂಸ್ಥಾನಮಠದಲ್ಲಿ ಅ.26ರಿಂದ 3 ದಿನ ಪಾರಂಪರಿಕ ವೈದ್ಯರ ರಾಷ್ಟ್ರೀಯ ಮತ್ತು 14ನೇ ರಾಜ್ಯ ಸಮ್ಮೇಳನ ಆಯೋಜಿಸಲಾಗಿದೆ. ಈ ಸಮ್ಮೇಳನಕ್ಕೆ ರಾಜ್ಯದ ನಾನಾ ಭಾಗಗಳಿಂದ ಸುಮಾರು 3000 ವೈದ್ಯರು ಹಾಗೂ ನೆರೆ ರಾಜ್ಯಗಳಿಂದ 500 ವೈದ್ಯರು ಸೇರಿ 3500 ಮಂದಿ ಪಾರಂಪರಿಕ ವೈದ್ಯರು ಭಾಗವಹಿಸಲಿದ್ದಾರೆ. ಸಮ್ಮೇಳನದಲ್ಲಿ ಪಾರಂಪರಿಕ ವೈದ್ಯರ ಬಗ್ಗೆ ಮಾಹಿತಿ ಕೋಶವನ್ನು ಕೃಷಿ ಸಚಿವ ಎನ್‌.ಚಲುವರಾಯಸ್ವಾಮಿ ಉದ್ಘಾಟಿಸಲಿದ್ದಾರೆ.

ಸಮ್ಮೇಳನದಲ್ಲಿ ಪ್ರಮುಖವಾಗಿ 6 ಗೋಷ್ಠಿಗಳು ನಡೆಯಲಿವೆ. ಐದು ಅನುಭವಿ ಪಾರಂಪರಿಕ ವೈದ್ಯರಿಗೆ ಪಾರಂಪರಿಕ ವೈದ್ಯ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

 

Advertisement

Udayavani is now on Telegram. Click here to join our channel and stay updated with the latest news.

Next