Advertisement
ಯಾವುದೇ ಕ್ರಮವಿಲ್ಲ: ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ-2009 ಹಾಗೂ “ಕರ್ನಾಟಕ ಮಕ್ಕಳ ಕಡ್ಡಾಯ ಹಾಗೂ ಉಚಿತ ಶಿಕ್ಷಣ ಹಕ್ಕು ನಿಯಮಗಳು-2012’ರ ಪ್ರಕಾರ ರಾಜ್ಯದಲ್ಲಿ ವಲಸೆ ಮಕ್ಕಳ ಶಿಕ್ಷಣ ಹಕ್ಕಿಗೆ ಸಂಬಂಧಿಸಿದಂತೆ ನೀತಿ ಜಾರಿಗೆ ತರಲು 2019ರ ಜು.20ಕ್ಕೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಲಾಗಿತ್ತು. ಆದರೆ, ಈವರೆಗೆ, ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ನ್ಯಾಯಾಲಯ ನಿರ್ದೇಶನ ನೀಡಬೇಕಾಗಿದೆ. ಅದರಂತೆ ಅ.31ರೊಳಗೆ ನೀತಿ ಅಳವಡಿಸಿಕೊಳ್ಳಲು ಕಾಲಮಿತಿ ನಿಗದಿ ಪಡಿಸಲಾಗಿದೆ ಎಂದು ನ್ಯಾಯಪೀಠ ಹೇಳಿದೆ.
Related Articles
Advertisement
ಇಮ್ಮಡಿ ಮಹದೇವಸ್ವಾಮಿಗೆ ಜಾಮೀನು ನಿರಾಕರಣೆಬೆಂಗಳೂರು: ಚಾಮರಾಜನಗರ ಜಿಲ್ಲೆಯ ಸುಳ್ವಾಡಿಯ ಕಿಚ್ಚುಗತ್ತಿ ಮಾರಮ್ಮ ದೇಗುಲದ ಪ್ರಸಾದದಲ್ಲಿ ವಿಷ ಬೆರೆಸಿದ ಪ್ರಕರಣದ ಪ್ರಮುಖ ಆರೋಪಿ ಇಮ್ಮಡಿ ಮಹದೇವಸ್ವಾಮಿಗೆ ಜಾಮೀನು ಮಂಜೂರು ಮಾಡಲು ಹೈಕೋರ್ಟ್ ನಿರಾಕರಿಸಿದೆ. ಇಮ್ಮಡಿ ಮಹದೇವಸ್ವಾಮಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ್ದ ತೀರ್ಪನ್ನು ಬುಧವಾರ ಪ್ರಕಟಿಸಿದ ನ್ಯಾ. ಕೆ.ಎನ್.ಫಣೀಂದ್ರ ಅವರಿದ್ದ ಏಕಸದಸ್ಯ ನ್ಯಾಯಪೀಠ, ಜಾಮೀನು ಅರ್ಜಿ ವಜಾಗೊಳಿಸಿ ಆದೇಶಿಸಿತು. ವಿಚಾರಣೆ ವೇಳೆ “ಇದು 16 ಮಂದಿ ಅಮಾಯಕರನ್ನು ಬಲಿ ತೆಗೆದುಕೊಂಡ ಗಂಭೀರ ಪ್ರಕರಣ. ಇದರಲ್ಲಿ ಇಮ್ಮಡಿ ಮಹದೇವಸ್ವಾಮಿ ಪ್ರಮುಖ ಆರೋಪಿಯಾಗಿದ್ದಾನೆ. ಮೇಲಾಗಿ ಸಮಾಜದಲ್ಲಿ ಆತ ಸ್ವಾಮೀಜಿ ಯಾಗಿ ಗುರುತಿಸಿಕೊಂಡಿದ್ದು ಪ್ರಭಾವಿಯೂ ಆಗಿದ್ದಾನೆ. ಜಾಮೀನಿನ ಮೇಲೆ ಹೊರ ಬಂದರೆ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ. ಪ್ರಕರಣ ಇನ್ನೂ ವಿಚಾರಣಾ ಹಂತದಲ್ಲಿದ್ದು, ಈ ಸಂದರ್ಭದಲ್ಲಿ ಜಾಮೀನು ಮಂಜೂರು ಮಾಡಬಾರದು’ ಎಂದು ಸರ್ಕಾರಿ ಅಭಿಯೋಜಕ ವಿ.ಎಸ್. ಹೆಗಡೆ ಅವರ ವಾದವನ್ನು ಪುರಸ್ಕರಿಸಿರುವ ಹೈಕೋರ್ಟ್ ಜಾಮೀನು ಅರ್ಜಿ ವಜಾಗೊಳಿಸಿದೆ. ಬೆಂ.ವಿವಿ ಕುಲಪತಿ ನೇಮಕ ರದ್ದತಿಗೆ ತಡೆ
ಬೆಂಗಳೂರು: ನಕಲಿ ಜಾತಿ ಪ್ರಮಾಣಪತ್ರ ಸಲ್ಲಿಕೆ ಸೇರಿ ಹಲವು ಅಕ್ರಮ ಮತ್ತು ಗಂಭೀರ ಆರೋಪ ಹಿನ್ನೆಲೆಯಲ್ಲಿ ಬೆಂಗಳೂರು ವಿವಿ ಕುಲಪತಿ ಕೆ.ಆರ್.ವೇಣುಗೋಪಾಲ್ ನೇಮಕ ರದ್ದುಪಡಿಸಿ ಮಂಗಳವಾರವಷ್ಟೇ (ಸೆ.24) ಏಕಸದಸ್ಯ ನ್ಯಾಯಪೀಠ ನೀಡಿದ ಆದೇಶಕ್ಕೆ ಹೈಕೋರ್ಟ್ ಬುಧವಾರ ಮಧ್ಯಂತರ ತಡೆ ಕೊಟ್ಟಿದೆ. ಈ ಕುರಿತಂತೆ ಕೆ.ಆರ್.ವೇಣುಗೋಪಾಲ್ ಮತ್ತು ಬೆಂಗಳೂರು ವಿವಿ ಪ್ರತ್ಯೇಕವಾಗಿ ಸಲ್ಲಿಸಿದ್ದ 2 ಮೇಲ್ಮನವಿಗಳು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ್, ನ್ಯಾ.ಎಸ್.ಆರ್.ಕೃಷ್ಣಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು.