ಚಿಕ್ಕಬಳ್ಳಾಪುರ ಜಿಲ್ಲೆಯ ಆವಲಗುರ್ಕಿ ಗ್ರಾಮ ಪಂಚಾಯಿತಿಯ ಸೂಲಕುಂಟೆ ಗ್ರಾಮದಲ್ಲಿರುವ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗದ ನಿವಾಸಿಗಳಿಗೆ ಸದ್ಗುರು ಜಗ್ಗಿವಾಸುದೇವ್ ಅವರ ಇಶಾ ಫೌಂಡೇಶನ್ ವತಿಯಿಂದ ನೀಡಿರುವ ಆಹಾರ ಧಾನ್ಯಗಳ ಕಿಟ್ ವಿತರಿಸಿ ಸೋಮವಾರ ಮಾತನಾಡಿದರು.
Advertisement
ಕೋವಿಡ್ ಎರಡನೇ ಅಲೆಗೆ ಸಂಬಂಧಿಸಿದಂತೆ ವೈಜ್ಞಾನಿಕ ಅಂಶಗಳ ತಳಹದಿ ಮೇಲೆ ಅಧ್ಯ ಯನ ನಡೆಸಿರುವ ಸಮಿತಿಯು ಮುಂದಿನ 15 ರಿಂದ ಒಂದು ತಿಂಗಳ ಅವಧಿಗೆ ಯಾವ ಕ್ರಮಗಳನ್ನು ಕೈಗೊಳ್ಳಬೇಕು ಎಂಬು ದನ್ನು ವರದಿಯಲ್ಲಿ ತಿಳಿಸಿದೆ. ಅದನ್ನು ಮುಖ್ಯಮಂತ್ರಿಯವರಿಗೆ ನೀಡಿದ್ದೇವೆ. ಸಚಿವ ಸಂಪುಟದ ಹಿರಿಯ ಸದಸ್ಯರ ಜತೆ ನಡೆಯುವ ಸಭೆಯಲ್ಲಿ ಸಿಎಂ ಅವರು ಈ ಬಗ್ಗೆ ಚರ್ಚಿಸಿ ಅಂತಿಮ ನಿರ್ಧಾರ ಪ್ರಕಟಿಸಲಿದ್ದಾರೆ. ತಜ್ಞರು ನೀಡುವ ಸಲಹೆಗಳಿಗೆ ಹೆಚ್ಚಿನ ಮಹತ್ವವಿದೆ ಎಂದು ತಿಳಿಸಿದರು.
ರಾಜ್ಯದಲ್ಲಿ 1250 ಮಂದಿಗೆ ಬ್ಲ್ಯಾಕ್ ಫಂಗಸ್ ಸೋಂಕು ಕಾಣಿಸಿಕೊಂಡಿದೆ. ಎಲ್ಲ ಜಿಲ್ಲೆಗಳಲ್ಲಿ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ. ಆದರೆ ಅಗತ್ಯ ಪ್ರಮಾಣದಲ್ಲಿ ಔಷಧ ಸಿಗುತ್ತಿಲ್ಲ. ಕೇಂದ್ರ ಸಚಿವ ಡಿ.ವಿ. ಸದಾನಂದಗೌಡರ ಜತೆ ನಿರಂತರ ಸಂಪರ್ಕ ಇಟ್ಟುಕೊಂಡು ಸಾಧ್ಯವಾದಷ್ಟು ಔಷಧ ತರಿಸುವ ಕೆಲಸ ಮಾಡಲಾಗುತ್ತಿದೆ. ಪ್ರತಿ ದಿನ 8 ರಿಂದ 10 ಸಾವಿರ ವಯಲ್ಸ… ಬೇಕಾಗಿದೆ ಎಂದು ಮನವಿ ಮಾಡಲಾಗಿದೆ. ಸದ್ಯ ರಾಜ್ಯಾದ್ಯಂತ ಆಕ್ಸಿಜನ್ ಬಳಕೆ ಕಡಿಮೆಯಾಗಿದೆ ಎಂದೂ ಸಚಿವರು ತಿಳಿಸಿದರು.
Related Articles
Advertisement
ಕೋವಿಡ್ ಕೇರ್ ಸೆಂಟರ್ ಉದ್ಘಾಟನೆನಂದಿ ಪಂಚಾಯಿತಿ ವ್ಯಾಪ್ತಿಯ ಕೊಲಮೇನಹಳ್ಳಿ ಯಲ್ಲಿರುವ ಮೊರಾರ್ಜಿ ವಸತಿ ಶಾಲೆ ಕ್ಯಾಂಪಸ್‌ಗೆ ಭೇಟಿ ನೀಡಿದ್ದ ಸಚಿವ ಸುಧಾಕರ್ ಅವರು ಜಿಲ್ಲಾಡಳಿತ ಸಿದ್ಧಪಡಿಸಿರುವ ಕೋವಿಡ್ ಕೇರ್ ಸೆಂಟರ್‌ಅನ್ನು ಉದ್ಘಾಟಿಸಿದರು. ಬಳಿಕ ಅಧಿಕಾರಿಗಳ ಜತೆ ಮಾತನಾಡಿ, ಕೋವಿಡ್ ಹಾರೈಕೆ ಕೇಂದ್ರಕ್ಕೆ ದಾಖಲಾಗುವ ಸೋಂಕಿತರಿಗೆ ಉತ್ತಮ ಗುಣಮಟ್ಟದ ಹಾರೈಕೆ ಒದಗಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು. ಉತ್ತಮ ಆಹಾರ, ಔಷಧೋಪಚಾರಗಳ ಜತೆಗೆ ಅವರಿಗೆ ಮಾನಸಿಕವಾಗಿ ಧೈರ್ಯ ತುಂಬುವ ಕೆಲಸ ಮಾಡಬೇಕಿದೆ ಎಂದೂ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಆರ್ ಲತಾ ಸೇರಿದಂತೆ ಜಿಲ್ಲೆಯ ಹಿರಿಯ ಅಧಿಕಾರಿಗಳು ಹಾಜರಿದ್ದರು. ವೈದ್ಯರ ನಡೆ ಹಳ್ಳಿ ಕಡೆ: ಸಂಜೆ ಗೌರಿಬಿದನೂರು ತಾಲೂಕು ಮಂಚೇನಹಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ವೈದ್ಯರ ನಡೆ ಹಳ್ಳಿ ಕಡೆ ಕಾರ್ಯಕ್ರಮಕ್ಕೆ ಸಚಿವ ಸುಧಾಕರ್ ಅವರು ಚಾಲನೆ ನೀಡಿದರು. ಲಾಕ್‌ಡೌನ್ ಬಗ್ಗೆ ವೈಜ್ಞಾನಿಕ ನೆಲೆಗಟ್ಟಿನಲ್ಲಿ ತೀರ್ಮಾನ
ಬೆಂಗಳೂರು: ಲಾಕ್ ಡೌನ್ ಕುರಿತು ರಾಜ್ಯ ಸರಕಾರ ವೈಜ್ಞಾನಿಕ ನೆಲೆಗಟ್ಟಿನಲ್ಲಿ ತೀರ್ಮಾನ ಕೈಗೊಳ್ಳಬೇಕಾಗುತ್ತದೆ. ಈ ಕುರಿತು ಮುಖ್ಯಮಂತ್ರಿ ಗಳು ತೀರ್ಮಾನ ಕೈಗೊಳ್ಳುತ್ತಾರೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ| ಕೆ.ಸುಧಾಕರ್ ತಿಳಿಸಿದರು. ಸೋಮವಾರ ಸುದ್ದಿಗಾರರೊಂದಿಗೆ ಮಾತ ನಾಡಿ, ಜನಪ್ರತಿನಿಧಿಗಳು ಜನರ ಜೀವನವನ್ನು ಬಹಳ ಹತ್ತಿರದಿಂದ ನೋಡುತ್ತಾರೆ. ಜನರ ಭಾವನೆ ಗಳಿಗೆ ಸ್ಪಂದಿಸಲು ಕೆಲ ಜನ ಪ್ರತಿನಿಧಿಗಳು ಲಾಕ್ ಡೌನ್ ಬಗ್ಗೆ ಹೇಳಿಕೆ ನೀಡ ಬಹುದು. ಆದರೆ ಸರಕಾರ ವೈಜ್ಞಾನಿಕ ನೆಲೆಗಟ್ಟಿನಲ್ಲೇ ಲಾಕ್ ಡೌನ್ ಕುರಿತು ತೀರ್ಮಾನ ಕೈಗೊಳ್ಳಬೇಕಾಗುತ್ತದೆ ಎಂದರು. ಲಾಕ್ ಡೌನ್ ಗೆ ಸಂಬಂಧಿಸಿದಂತೆ ತಜ್ಞರು ವರದಿ ಸಲ್ಲಿಸಲಿದ್ದಾರೆ. ಇದನ್ನು ಮುಖ್ಯಮಂತ್ರಿಗಳಿಗೆ ನೀಡಿ ಚರ್ಚಿಸಲಾಗುವುದು. ನಂತರ ಮುಖ್ಯಮಂತ್ರಿಗಳು ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತಾರೆ ಎಂದರು. ಲಾಕ್ ಡೌನ್ ಎನ್ನುವುದು ವೈದ್ಯಕೀಯ ಸಂಗತಿ. ಪ್ರಕರಣಗಳ ಸಂಖ್ಯೆ ಹೆಚ್ಚಾದಾಗ ಎಷ್ಟೆಲ್ಲ ಸಾವು ನೋವುಗಳಾಗಿದೆ ಎಂಬುದನ್ನು ಅರಿಯಬೇಕು. ಇದು ಸಾಂಕ್ರಾಮಿಕವಾಗಿ ರುವುದರಿಂದ ಬಹಳ ಎಚ್ಚರಿಕೆ ಬೇಕು. ಲಾಕ್ ಡೌನ್ ಅನ್ನು ತಾಂತ್ರಿಕವಾಗಿ ಅರ್ಥ ಮಾಡಿಕೊಳ್ಳದೆ, ವೈದ್ಯಕೀಯ ವಲಯದ ಪರಿಣತರ ಅಭಿಪ್ರಾಯ ಪಡೆಯದೆ ಅದರ ಬಗ್ಗೆ ಮಾತನಾಡುವುದು ಅಪ್ರಸ್ತುತ ಎಂದರು. ಈ ಸಂದರ್ಭದಲ್ಲಿ ರಾಜಕೀಯದ ಬಗ್ಗೆ ಮಾತನಾಡುವುದೇ ಅಪ್ರಸ್ತುತ. ಮುಖ್ಯಮಂತ್ರಿ ಕುರ್ಚಿ ಖಾಲಿಯೇ ಇಲ್ಲದಿರುವಾಗ ಆ ಬಗ್ಗೆ ಮಾತನಾಡುವುದೇ ಅಸಂಬದ್ಧ ಎಂದರು.