Advertisement

Odisha Assembly poll: ಒಡಿಶಾ ವಿಧಾನಸಭೆ ಈ ಬಾರಿ ಬಿಜೆಪಿ ತೆಕ್ಕೆಗೆ, ಬಿಜೆಡಿಗೆ ಮುಖಭಂಗ?

01:35 PM Jun 03, 2024 | Team Udayavani |

ನವದೆಹಲಿ: ಒಡಿಶಾ ವಿಧಾನಸಭೆಯ ಕೊನೆಯ ಹಂತ ಹಾಗೂ ಲೋಕಸಭೆ ಚುನಾವಣೆಯ ಅಂತಿಮ ಹಂತ ಶನಿವಾರ ಅಂತ್ಯಗೊಂಡಿದ್ದು, ಒಡಿಶಾದ 147 ವಿಧಾನಸಭಾ ಕ್ಷೇತ್ರಗಳಿಗೆ ಹಾಗೂ 21 ಲೋಕಸಭಾ ಸ್ಥಾನಗಳಿಗೆ ಚುನಾವಣೆ ನಡೆದಿದೆ.

Advertisement

ಇದನ್ನೂ ಓದಿ:Shimoga: ಮಟನ್ ಹೆಚ್ಚಿಗೆ ಹಾಕೆಂದು ಹೇಳಿದ್ದಕ್ಕೆ ಅನ್ಯಕೋಮಿನ ಯುವಕನಿಂದ ಮಚ್ಚೇಟು!

ಮೇ 13, ಮೇ 20, ಮೇ 25 ಹಾಗೂ ಜೂನ್‌ 1 ಸೇರಿದಂತೆ ನಾಲ್ಕು ಹಂತದಲ್ಲಿ ಒಡಿಶಾದಲ್ಲಿ ಚುನಾವಣೆ ನಡೆದಿತ್ತು. ಒಡಿಶಾ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆ ಏಕಕಾಲದಲ್ಲಿ ಮುಕ್ತಯಗೊಂಡಿದ್ದು, ಏತನ್ಮಧ್ಯೆ ಚುನಾವಣೋತ್ತರ ಸಮೀಕ್ಷೆ ಪ್ರಕಟಗೊಂಡಿದೆ. ಈ ಬಾರಿ ಒಡಿಶಾದಲ್ಲಿ ನವೀನ್‌ ಪಟ್ನಾಯಕ್‌ ಅಧಿಕಾರ ಕಳೆದುಕೊಳ್ಳುವ ಸಾಧ್ಯತೆ ಇದ್ದಿರುವುದಾಗಿ ಸಮೀಕ್ಷೆಗಳು ಹೇಳಿವೆ.

ಇಂಡಿಯಾ ಟುಡೇ ಮತ್ತು ಆಕ್ಸಿಸ್‌ ಮೈ ಇಂಡಿಯಾ ಸಮೀಕ್ಷೆ ಪ್ರಕಾರ, ಒಡಿಶಾ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ 62ರಿಂದ 80 ಸ್ಥಾನ ಪಡೆಯುವ ಸಾಧ್ಯತೆ ಇದೆ. ಮುಖ್ಯಮಂತ್ರಿ ನವೀನ್‌ ಪಟ್ನಾಯಕ್‌ ನೇತೃತ್ವದ ಬಿಜೆಡಿ 50ರಿಂದ 60 ಸ್ಥಾನ ಪಡೆಯಲಿದೆ ಎಂದು ಸಮೀಕ್ಷೆ ಭವಿಷ್ಯ ನುಡಿದಿದೆ.

ಕಾಂಗ್ರೆಸ್‌ ಪಕ್ಷ 5ರಿಂದ 8 ಸ್ಥಾನ ಪಡೆಯುವ ಸಾಧ್ಯತೆ ಇದೆ ಎಂದು ಸಮೀಕ್ಷೆ ಉಲ್ಲೇಖಿಸಿದೆ. ಬಿಜೆಪಿಯ ಮತ ಪ್ರಮಾಣ ಶೇ.42ರಷ್ಟು ಹೆಚ್ಚಳವಾಗಲಿದ್ದು, ಬಿಜೆಡಿ ಮತ ಪ್ರಮಾಣ ಶೇ.42ರಷ್ಟು ಕುಸಿಯಲಿದ್ದು, ಕಾಂಗ್ರೆಸ್‌ ಕೇವಲ ಶೇ.12ರಷ್ಟು ಮತ ಪಡೆಯಲಿದೆ ಎಂದು ಸಮೀಕ್ಷೆ ತಿಳಿಸಿದೆ.

Advertisement

2019ರ ಒಡಿಶಾ ವಿಧಾನಸಭಾ ಚುನಾವಣೆ:

2019ರಲ್ಲಿ ನಡೆದ ಒಡಿಶಾ ವಿಧಾನಸಭಾ ಚುನಾವಣೆಯಲ್ಲಿ ಬಿಜು ಜನತಾ ದಳ 147 ಸದಸ್ಯಬಲದಲ್ಲಿ 112 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. ಬಿಜೆಪಿ 23 ಕ್ಷೇತ್ರಗಳಲ್ಲಿ, ಕಾಂಗ್ರೆಸ್‌ 9 ಸ್ಥಾನಗಳಲ್ಲಿ ಜಯ ಸಾಧಿಸಿತ್ತು. 2024ರ ಲೋಕಸಭೆ ಚುನಾವಣೆ ಹಾಗೂ ಒಡಿಶಾ ವಿಧಾನಸಭೆ ಚುನಾವಣಾ ಫಲಿತಾಂಶ ಜೂನ್‌ 4ರಂದು ಬಹಿರಂಗವಾಗಲಿದೆ.

ಲೋಕಸಭಾ ಚುನಾವಣೆಯ ಸಮೀಕ್ಷೆ :

ರಿಪಬ್ಲಿಕ್‌ Pmarq ಸಮೀಕ್ಷೆ ಪ್ರಕಾರ, ಒಡಿಶಾ ಲೋಕಸಭಾ ಚುನಾವಣೆಯಲ್ಲಿ ಎನ್‌ ಡಿಎ 14 ಸ್ಥಾನ ಗಳಿಸಲಿದ್ದು, ಬಿಜೆಡಿ 8 ಕ್ಷೇತ್ರಗಳಲ್ಲಿ ಜಯ ಗಳಿಸಲಿದೆ. ನ್ಯೂಸ್‌ 18 ಚುನಾವಣೋತ್ತರ ಸಮೀಕ್ಷೆಯಲ್ಲಿ ಎನ್‌ ಡಿಎ 13ರಿಂದ 15, ಬಿಜೆಡಿ 6ರಿಂದ 8 ಸ್ಥಾನಗಳಲ್ಲಿ ಜಯ ಗಳಿಸಲಿದೆ ಎಂದು ವರದಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next