ಭುವನೇಶ್ವರ: ಒಡಿಶಾದಲ್ಲಿ ಏ.29ರಿಂದ ಮೇ 7ರವರೆಗೆ ನಡೆದ 10ನೇ ತರಗತಿ ಪರೀಕ್ಷೆಯಲ್ಲಿ ಬರೋಬ್ಬರಿ 43,489 ವಿದ್ಯಾರ್ಥಿಗಳು ಗೈರಾಗಿದ್ದಾರೆ.
ಈ ಪ್ರಮಾಣದಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ತಪ್ಪಿಸಿಕೊಳ್ಳುವುದಕ್ಕೆ ಕಾರಣ ಏನು ಎನ್ನುವುದರ ಬಗ್ಗೆ ತನಿಖೆ ನಡೆಸಿ ವರದಿ ಒಪ್ಪಿಸುವಂತೆ ಸರ್ಕಾರ ಜಿಲ್ಲಾ ತರಬೇತಿ ಕೇಂದ್ರಗಳಿಗೆ ಸೂಚಿಸಿದೆ. ಒಟ್ಟು 5.71 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದರು. ಆದರೆ ಅದರಲ್ಲಿ 5.3 ಲಕ್ಷ ವಿದ್ಯಾರ್ಥಿಗಳು ಮಾತ್ರವೇ ಪರೀಕ್ಷೆ ಬರೆದಿದ್ದಾರೆ.
ಕಳೆದ ವರ್ಷ ನಡೆದಿದ್ದ ಪರೀಕ್ಷೆಯಲ್ಲಿ ಕೇವಲ 4,412 ವಿದ್ಯಾರ್ಥಿಗಳು ಮಾತ್ರವೇ ಗೈರಾಗಿದ್ದರು. ಈ ಬಾರಿ, ಮಯೂರ್ಭಂಜ್, ಗಂಜಾಂ ಮತ್ತು ಬೋಲಂಗೀರ್ ಜಿಲ್ಲೆಗಳಲ್ಲಿ ಅತಿ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ತಪ್ಪಿಸಿಕೊಂಡಿದ್ದಾರೆ.