Advertisement

Odisha ಕಾಲೇಜಿನ ವಿಡಿಯೋ ಉಡುಪಿಯದ್ದು ಎಂದು ವೈರಲ್: ಕೇಸ್ ದಾಖಲು

10:43 AM Apr 24, 2024 | Team Udayavani |

ಉಡುಪಿ: ಒಡಿಶಾದ ಕಾಲೇಜೊಂದರಲ್ಲಿ ಈ ಹಿಂದೆ ನಡೆದ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹಲವಾರು ದಿನಗಳಿಂದ ಹರಿದಾಡುತ್ತಿದ್ದು .ದುರುದ್ದೇಶ ಪೂರ್ವಕವಾಗಿ ಕೆಲ ಕಿಡಿಗೇಡಿಗಳು ಈ ಘಟನೆಯು ಉಡುಪಿ ಜಿಲ್ಲೆಯಲ್ಲಿ ನಡೆದಿರುವುದು ಎಂಬಂತೆ ಬಿಂಬಿಸಿ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಂಚಿಕೊಳ್ಳುತ್ತಿರುವುದು ಕಂಡು ಬಂದಿದೆ.

Advertisement

ಈ ಸಂಬಂಧ Zero @kikgkanishka ಎಂಬಾತನ ಮೇಲೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದ ಇತರ ವ್ಯಕ್ತಿಗಳ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ತಿಳಿಸಿದ್ದಾರೆ.

ಇನ್ನು ಮುಂದೆ ಇಂತಹ ವಿಡಿಯೋಗಳನ್ನು ಪ್ರಸಾರ ಮಾಡಿದರೆ ಅವರ ವಿರುದ್ಧ ಕಠಿನ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next