ಭುವನೇಶ್ವರ್ : ಕರ್ತವ್ಯದಲ್ಲಿರುವ ಯಾವುದೇ ಕೋವಿಡ್ ವಾರಿಯರ್ ಮೃತರಾದರೇ ಆ ಕುಟುಂಬಕ್ಕೆ ಪರಿಹಾರವಾಗಿ 50 ಲಕ್ಷ ರೂಪಾಯಿ ನೀಡುವುದಾಗಿ ಒಡಿಶಾ ಸರ್ಕಾರ ಘೋಷಿಸಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಜ್ಯದಲ್ಲಿ ಕೋವಿಡ್ ಸೋಂಕಿನ ರೂಪಾಂತರಿ ಅಲೆ ತೀವ್ರ ಗತಿಯಲ್ಲಿ ಹೆಚ್ಚುತ್ತಿದೆ. ಈ ಸಂದರ್ಭದಲ್ಲಿ ರಾಜ್ಯದಲ್ಲಿ ಕರ್ತವ್ಯ ನಿರತ ಕೋವಿಡ್ ವಾರಿಯರ್ ಯಾರಾದರೂ ಮೃತರಾದರೇ, ಅವರ ಕುಟುಂಬಕ್ಕೆ ಪರಿಹಾರವಾಗಿ ನೀಡಲಾಗುವುದು.
ಓದಿ : ಕೋವಿಡ್ 19 : ಭಾರತದಲ್ಲಿ ಸೋಂಕಿತರ ಚಿಕಿತ್ಸಗೆ ವೈದ್ಯಕೀಯ ಸಿಬ್ಬಂದಿಗಳ ಕೊರತೆ ?!
ಆದರೇ, ಈ ಪರಿಹಾರವು ಪ್ರಧಾನ್ ಮಂತ್ರಿ ಗರೀಬ್ ಕಲ್ಯಾಣ್ ಪ್ಯಾಕೇಜ್ ಇನ್ಸುರೆನ್ಸ್ ಸ್ಕೀಮ್ ಅಡಿಯಲ್ಲಿ ಕೊಡಮಾಡುವ ಪರಿಹಾರವಲ್ಲ. ಈ ಪರಿಹಾರವನ್ನು ರಾಜ್ಯ ಸರ್ಕಾರವೇ ಭರಿಸಲಿದೆ ಎಂದು ಇಲಾಖೆ ಸ್ಪಷ್ಟಪಡಿಸಿದೆ.
ಇನ್ನು, ಕಳೆದ ವರ್ಷ ಮುಖ್ಯಮಂತ್ರಿ ನವೀನ್ ಪಟ್ನಾಯಕ್, ಆರೋಗ್ಯ ಸಿಬ್ಬಂದಿ, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರು ಮತ್ತು ಕೋವಿಡ್ -19 ಕರ್ತವ್ಯದಲ್ಲಿ ತೊಡಗಿರುವ ಪೊಲೀಸರು ಸೇರಿದಂತೆ ಸೋಂಕಿನಿಂದ ಮೃತಪಟ್ಟ ಕೋವಿಡ್ ವಾರಿಯರ್, ಕುಟುಂಬ ಸದಸ್ಯರಿಗೆ 50 ಲಕ್ಷ ರೂ. ನೀಡುವುದಾಗಿ ಘೋಷಿಸಿದ್ದರು.
ಏತನ್ಮಧ್ಯೆ, ರಾಜ್ಯದಲ್ಲಿ ಕೋವಿಡ್ 19 ಪ್ರಕರಣಗಳು ತೀವ್ರವಾಗಿ ಏರಿಕೆಯಾದ ನಂತರ ಒಡಿಶಾ ಸರ್ಕಾರ ತನ್ನ ಕಚೇರಿಗಳ ಕಾರ್ಯನಿರ್ವಹಣೆಗೆ ಹಿಂದಿನ ಆದೇಶವನ್ನು ಪರಿಷ್ಕರಿಸಿದೆ.
ಓದಿ : 18 ರಿಂದ 45 ವರ್ಷದೊಳಗಿನವರಿಗಾಗಿ ಹಂತ ಹಂತವಾಗಿ ಲಸಿಕೆ ಅಭಿಯಾನ: ಸಿಎಂ ಬಿ.ಎಸ್ ಯಡಿಯೂರಪ್ಪ