Advertisement
ಪಕ್ಷದ ಅಭ್ಯರ್ಥಿಗಳ ಪರ ಒಡಿಶಾದ ರಾಜಧಾನಿಯಲ್ಲಿ ಭರ್ಜರಿ ರೋಡ್‌ಶೋದಲ್ಲಿ ಭಾಗಿಯಾದ ನಡ್ಡಾ, ‘ಕಳೆದ 24 ವರ್ಷಗಳಿಂದ ಒಡಿಶಾದಲ್ಲಿ ಆಡಳಿತ ನಡೆಸುತ್ತಿರುವ ನವೀನ್ ಪಟ್ನಾಯಕ್‌ಗೆ ಬೀಳ್ಕೊಡುಗೆ ಕೊಟ್ಟು ವಿಶ್ರಾಂತಿ ನೀಡಲು ನಿರ್ಧರಿಸಿದ್ದಾರೆ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರವನ್ನು ಆಯ್ಕೆ ಮಾಡಲಿದ್ದಾರೆ ಎಂದು ಜನರ ಉತ್ಸಾಹವು ಸೂಚಿಸುತ್ತದೆ’ ಎಂದರು.
Related Articles
Advertisement
ಲೋಕಸಭೆ ಮತ್ತು ವಿಧಾನಸಭೆಗೆ ಏಕಕಾಲದಲ್ಲಿ ಚುನಾವಣೆ ನಡೆಯುತ್ತಿದ್ದು, ಬಿಜೆಡಿ ಕೈಯಿಂದ ಬಿಜೆಪಿ ಅಧಿಕಾರ ಕಸಿಯಲು, ಹೆಚ್ಚು ಸಂಸತ್ ಸದಸ್ಯರ ಆಯ್ಕೆಗಾಗಿ ಭರ್ಜರಿ ಪ್ರಚಾರ ನಡೆಸುತ್ತಿದೆ.
ಮುಖ್ಯಮಂತ್ರಿ ಮತ್ತು ಬಿಜೆಡಿ ಅಧ್ಯಕ್ಷ ನವೀನ್ ಪಟ್ನಾಯಕ್ ಅವರು ಗುರುವಾರ ಸಂಜೆ ಭುವನೇಶ್ವರದಲ್ಲಿ ರೋಡ್ ಶೋ ನಡೆಸಲಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಕಂಧಮಾಲ್ ಜಿಲ್ಲೆಯ ಫುಲ್ಬಾನಿಯಲ್ಲಿ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಹಿರಿಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬೋಲಂಗಿರ್‌ನಲ್ಲಿ ಚುನಾವಣಾ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಒಂದು ದಿನದ ಕಾಂಗ್ರೆಸ್ ಇನ್ನೊಂದು ಬೃಹತ್ ಸಭೆ ನಡೆಸುತ್ತಿದೆ.
ಎರಡು ಬಾರಿ ಒಡಿಶಾಗೆ ಚುನಾವಣಾ ಪ್ರಚಾರಕ್ಕಾಗಿ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಮೇ 20 ರಂದು ಮತ್ತೊಮ್ಮೆ ಭೇಟಿ ನೀಡಲಿದ್ದಾರೆ. ಕೇಂದ್ರ ಸಚಿವರಲ್ಲದೆ, ಬಿಜೆಪಿ ಆಡಳಿತವಿರುವ ಅಸ್ಸಾಂ, ಛತ್ತೀಸ್ ಗಢ ಮತ್ತು ರಾಜಸ್ಥಾನದ ಮುಖ್ಯಮಂತ್ರಿಗಳು ಪ್ರಚಾರ ನಡೆಸಿದ್ದಾರೆ.