ಚಿಕ್ಕಮಗಳೂರು: ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ಸಂಭವಿಸಿದ ಭೀಕರ ರೈಲು ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 233ಕ್ಕೆ ಏರಿಕೆಯಾಗಿದೆ. 900ಕ್ಕೂ ಹೆಚ್ಚು ಮಂದಿಗೆ ಗಾಯಗೊಂಡಿದ್ದಾರೆ.
ಕೋರಮಂಡಲ ಎಕ್ಸ್‌ಪ್ರೆಸ್ ರೈಲಿನಲ್ಲಿ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನಿಂದ 110 ಮಂದಿ ಪ್ರಯಾಣಿಸುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದ್ದು, ಅವರೆಲ್ಲರೂ ಸುರಕ್ಷಿತವಾಗಿದ್ದಾರೆ ಎನ್ನಲಾಗಿದೆ.
ಕಳಸ, ಸಂಸೆ. ಹೊರನಾಡು ಸುತ್ತಮುತ್ತಲಿನ ಜೈನ ಸಮುದಾಯದ 110 ಮಂದಿ ಎರಡು ದಿನಗಳ ಹಿಂದೆ ಜಾರ್ಖಂಡ್‌ನ ಸಮ್ಮೇದ್ ಶಿಖರ್ಜಿ ತೀರ್ಥಕ್ಷೇತ್ರಕ್ಕೆ ಪ್ರಯಾಣ ಬೆಳೆಸಿದ್ದರು. ಇವರೆಲ್ಲಾ ಬೆಂಗಳೂರಿನಿಂದ ರೈಲು ಮೂಲಕ ತೆರಳಿದ್ದರು. ಆದರೆ ಶುಕ್ರವಾರ ರಾತ್ರಿ 8.30 ಕ್ಕೆ ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಶಾಲಿಮಾರ್ ಚೆನ್ನೈ ಕೋರಮಂಡಲ ಎಕ್ಸ್‌ಪ್ರೆಸ್ ರೈಲು ಹಾಗೂ ಗೂಡ್ಸ್ ರೈಲು ಡಿಕ್ಕಿಯಾಗಿದ್ದರಿಂದ ಭೀಕರ ಅಪಘಾತ ಸಂಭವಿಸಿದೆ.
ಘಟನೆಯಲ್ಲಿ ಕಳಸ ತಾಲೂಕಿನಿಂದ ತೆರಳಿದ್ದ 110 ಮಂದಿಗೆ ಯಾವುದೇ ಅಪಾಯ ಸಂಭವಿಸಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.
Related Articles