Advertisement

295 ಪ್ರಯಾಣಿಕರ ಸಾವಿಗೆ ಕಾರಣವಾದ ಒಡಿಶಾ ರೈಲು ದುರಂತಕ್ಕೆ ಇದುವೇ ಕಾರಣವಂತೆ

10:33 AM Jul 22, 2023 | Team Udayavani |

ಒಡಿಶಾ: ಜೂನ್ ಎರಡರಂದು ಒಡಿಶಾದ ಬಾಲಸೋರ್‌ನಲ್ಲಿ ಮೂರು ರೈಲುಗಳ ನಡುವೆ ಸಂಭವಿಸಿದ ಅವಘಡದಲ್ಲಿ ಸುಮಾರು 295 ಮೃತಪಟ್ಟಿದ್ದು ಸಾವಿರಕ್ಕೂ ಹೆಚ್ಚು ಮಂದಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Advertisement

ಈ ಅಪಘಾತಕ್ಕೆ ಸಂಬಂಧಿಸಿದಂತೆ ರಾಜ್ಯಸಭೆಯಲ್ಲಿ ಕಮ್ಯುನಿಸ್ಟ್ ಪಾರ್ಟಿ ನಾಯಕ ಜಾನ್ ಬ್ರಿಟಾಸ್ ಮತ್ತು ಆಮ್ ಆದ್ಮಿ ಪಕ್ಷದ ನಾಯಕ ಸಂಜಯ್ ಸಿಂಗ್ ಅವರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಸಿಗ್ನಲ್ ದೋಷದಿಂದ ತ್ರಿವಳಿ ರೈಲು ದುರಂತ ಸಂಭವಿಸಿದೆ ಎಂದು ಹೇಳಿದ್ದಾರೆ. ಗೂಮ್ಟಿ ರೈಲು ನಿಲ್ದಾಣದಲ್ಲಿ ಸಿಗ್ನಲಿಂಗ್ ಸರ್ಕ್ಯೂಟ್ ಮತ್ತು ಎಲೆಕ್ಟ್ರಿಕ್ ಲಿಫ್ಟಿಂಗ್ ಬ್ಯಾರಿಯರ್ ಅನ್ನು ಬದಲಾಯಿಸುವ ಸಿಗ್ನಲಿಂಗ್ ಕಾರ್ಯಗತಗೊಳಿಸುವ ಸಮಯದಲ್ಲಿ ಉಂಟಾದ ಲೋಪದಿಂದ ಈ ಅವಘಡ ಸಂಭವಿಸಿದೆ ಎಂದು ತನಿಖಾಧಿಕಾರಿಗಳು ನೀಡಿದ ವರದಿಯಲ್ಲಿ ಬಹಿರಂಗಗೊಂಡಿದೆ.

ನಾಗರಿಕ ವಿಮಾನಯಾನ ಸಚಿವಾಲಯದ ಅಡಿಯಲ್ಲಿ ರೈಲ್ವೆ ಸುರಕ್ಷತಾ ಆಯುಕ್ತರು ಬಾಲಸೋರ್ ರೈಲು ಅಪಘಾತದ ತನಿಖೆಯನ್ನು ಪೂರ್ಣಗೊಳಿಸಿದ್ದಾರೆ ಎಂದು ಸಚಿವರು ತಿಳಿಸಿದರು.

ಜೂನ್ 2 ರಂದು ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಚೆನ್ನೈಗೆ ಹೋಗುವ ಕೋರಮಂಡಲ್ ಎಕ್ಸ್‌ಪ್ರೆಸ್, ಹೌರಾಕ್ಕೆ ಹೋಗುವ ಶಾಲಿಮಾರ್ ಎಕ್ಸ್‌ಪ್ರೆಸ್ ಮತ್ತು ಗೂಡ್ಸ್ ರೈಲು ಅಪಘಾತಕ್ಕೀಡಾಗಿದೆ ಈ ಅಪಘಾತದಲ್ಲಿ 295 ಜನರು ಮೃತಪಟ್ಟಿದ್ದು ಒಂದು ಸಾವಿರಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಇದನ್ನೂ ಓದಿ: ಚಿಕ್ಕಬಳ್ಳಾಪುರ: ಥಳಿಸಿ ತಾಳಿ ಕಟ್ಟಿಸಿಕೊಂಡ ಪ್ರಿಯತಮೆ!

Advertisement
Advertisement

Udayavani is now on Telegram. Click here to join our channel and stay updated with the latest news.

Next