Advertisement
ಮಹಿಳಾ ಅಭ್ಯರ್ಥಿಗಳು ವಿಸ್ತಾರವಾದ ಕಸೂತಿ, ಹೂಗಳು, ಬ್ರೂಚ್‌ಗಳು ಅಥವಾ ಬಟನ್ ಹೊಂದಿರುವ ಬಟ್ಟೆ ಧರಿಸುವುದು, ಪೂರ್ಣ ತೋಳಿನ ಬಟ್ಟೆ / ಜೀನ್ಸ್ ಪ್ಯಾಂಟ್ ಧರಿಸುವುದು, ಎತ್ತರವಾದ ಹಿಮ್ಮಡಿಯ ಶೂ, ಚಪ್ಪಲಿ, ದಪ್ಪವಾದ ಅಡಿ ಭಾಗ ಹೊಂದಿರುವ ಶೂ ಅಥವಾ ಚಪ್ಪಲಿ ಧರಿಸುವಂತಿಲ್ಲ.
ಮಹಿಳಾ ಅಭ್ಯರ್ಥಿಗಳಿಗೆ ಮಂಗಳಸೂತ್ರ ಮತ್ತು ಕಾಲುಂಗುರ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಿದೆ. ಉಳಿದಂತೆ ಯಾವುದೇ ರೀತಿಯ ಲೋಹದ ಆಭರಣ ಧರಿಸುವುದನ್ನು ನಿಷೇಧಿಸಿದೆ.
ಪುರುಷ ಅಭ್ಯರ್ಥಿಗಳು ಪೂರ್ಣ ತೋಳಿನ ಶರ್ಟ್, ಕುರ್ತಾ ಪೈಜಾಮ, ಜೀನ್ಸ್ ಪ್ಯಾಂಟ್, ಜಿಪ್ ಪಾಕೆಟ್‌ಗಳು, ಪಾಕೆಟ್‌ಗಳು, ದೊಡ್ಡ ಬಟನ್ ಮತ್ತು ವಿಸ್ತಾರವಾದ ಕಸೂತಿ ಇರುವ ಬಟ್ಟೆಗಳನ್ನು ಧರಿಸುವಂತಿಲ್ಲ. ಕುತ್ತಿಗೆಯ ಸುತ್ತ ಯಾವುದೇ ಲೋಹದ ಆಭರಣ ಧರಿಸುವುದು ಅಥವಾ ಕಿವಿಯೋಲೆ, ಉಂಗುರ, ಕಡಗ ಧರಿಸುವಂತಿಲ್ಲ. ಜೇಬುಗಳು ಇಲ್ಲದಿರುವ, ಕಡಿಮೆ ಜೇಬುಗಳಿರುವ, ಹಗುರವಾದ ಬಟ್ಟೆಗಳನ್ನು ಧರಿಸಿದರೆ ಉತ್ತಮ ಎಂದು ಕೆಇಎ ಹೇಳಿದೆ. ಪರೀಕ್ಷಾ ಹಾಲ್ ಒಳಗೆ ಶೂಗಳನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಮೊಬೈಲ್ ಫೋನ್, ಪೆನ್ ಡ್ರೈವ್, ಇಯರ್ ಫೋನ್, ಮೈಕ್ರೋಫೋನ್, ಬ್ಲೂ ಟೂತ್, ಕೈ ಗಡಿಯಾರ, ತಿನ್ನಬಹುದಾದ ವಸ್ತು, ಪೆನ್ಸಿಲ್, ಪೇಪರ್, ಇರೇಸರ್, ಜಾಮಿಟ್ರಿ ಬಾಕ್ಸ್, ಲಾಗ್ ಟೇಬಲ್ ಅನ್ನು ತರುವಂತಿಲ್ಲ.
Related Articles
Advertisement