Advertisement

Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್‌

12:35 AM Nov 15, 2024 | Team Udayavani |

ಬೆಂಗಳೂರು: ಅಬಕಾರಿ ಇಲಾಖೆಯಲ್ಲಿನ ಭ್ರಷ್ಟಾಚಾರವನ್ನು ವಿರೋಧಿಸಿ ಮತ್ತು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಫೆಡರೇಶನ್‌ ಆಫ್ ವೈನ್‌ ಮರ್ಚಂಟ್ಸ್‌ ಅಸೋಸಿಯೇಶನ್‌ “ಸ್ವತ್ಛ ಅಬಕಾರಿ ಅಭಿಯಾನ’ದ ಅಡಿಯಲ್ಲಿ ನ. 20ರಂದು ರಾಜ್ಯ ವ್ಯಾಪಿ ಮದ್ಯ ಮಾರಾಟ ಬಂದ್‌ಗೆ ಕರೆ ನೀಡಿದೆ.

Advertisement

ಅಸೋಸಿಯೇಶನ್‌ನ ಪ್ರಧಾನ ಕಾರ್ಯದರ್ಶಿ ಬಿ. ಗೋವಿಂದರಾಜ್‌ ಹೆಗ್ಡೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಅಬಕಾರಿ ಕಾಯ್ದೆ ಕಲಂ 29ನ್ನು ಪುನರ್‌ ವಿಮರ್ಶಿಸಿ, ತಿದ್ದುಪಡಿ ಮಾಡಬೇಕು, ಚಿಲ್ಲರೆ ಮದ್ಯ ಮಾರಾಟದ ಮೇಲೆ ಕನಿಷ್ಠ ಶೇ. 20 ಲಾಭಾಂಶ ಕೊಡ ಬೇ ಕು, ನಕಲಿ ಮದ್ಯ ತಯಾರಕರ ಮೇಲೆ ಕಠಿನ ಕಾನೂನು ಕ್ರಮ ಜರಗಿಸಬೇಕು, ಸಿ.ಎಲ್‌. -2ಗಳಲ್ಲಿ ಮದ್ಯ ಸೇವಿಸಲು ಅವಕಾಶ ಕೊಡ ಬೇಕು ಹಾಗೂ ಪಾರ್ಸಲ್‌ ನಿಯಮ ತಿದ್ದುಪಡಿ ತರ ಬೇಕು ಎಂಬುದು ನಮ್ಮ ಪ್ರಮುಖ ಬೇಡಿಕೆಗಳಾಗಿವೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next