Advertisement

ನ. 29ರಿಂದ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್‌

11:35 PM Nov 26, 2021 | Team Udayavani |

ಬೆಂಗಳೂರು: ತಾಲೂಕು ಹಂತದಲ್ಲಿ ಮಂಜೂರಾಗಿರುವ ಹುದ್ದೆಯಲ್ಲಿ ಶೇ.25ರಷ್ಟು ಶಿಕ್ಷಕರಿಗೆ ವರ್ಗಾವಣೆಯಲ್ಲಿ ಅವಕಾಶ ಮಾಡಿ ಕೊಡುವ ನಿಟ್ಟಿನಲ್ಲಿ ತಾತ್ಕಾಲಿಕವಾಗಿ ಮುಂದೂಡಲಾಗಿದ್ದ ಕೋರಿಕೆ ಹಾಗೂ ಪರಸ್ಪರ ವರ್ಗಾವಣೆಯ ವೇಳಾಪಟ್ಟಿ ಪ್ರಕಟಗೊಂಡಿದೆ.

Advertisement

ಪ್ರಾಥಮಿಕ ಶಾಲಾ ಶಿಕ್ಷಕರಿಗೆ ನ.29ರಿಂದ ಹಾಗೂ ಪ್ರೌಢಶಾಲಾ ಶಿಕ್ಷಕರಿಗೆ ಡಿ.2ರಿಂದ ಕೌನ್ಸೆಲಿಂಗ್‌ ಪ್ರಕ್ರಿಯೆ ಆರಂಭಗೊಳ್ಳಲಿದೆ. ವರ್ಗಾ ವಣೆ ಪ್ರಕ್ರಿಯೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರು, ಮುಖ್ಯ ಶಿಕ್ಷಕರು, ತತ್ಸಮಾನ ವೃಂದದ ಶಿಕ್ಷಕರು ಮತ್ತು ಅಧಿಕಾರಿಗಳ ವರ್ಗಾವಣೆ ಪ್ರಕ್ರಿಯೆಯನ್ನು ಮುಂದುವರಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಡಾ| ಆರ್‌. ವಿಶಾಲ್‌ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ:ಇಬ್ಬಗೆ ನೀತಿ ಬಿಡಿ; ಕಿಡಿಗೇಡಿಗಳ ಶಿಕ್ಷಿಸಿ; ಪಾಕಿಸ್ತಾನ ವಿರುದ್ಧ ಕೇಂದ್ರದ ತರಾಟೆ

ಜಿಲ್ಲಾ, ವಿಭಾಗೀಯ ಮತ್ತು ಅಂತರ್‌ ವಿಭಾಗೀಯ ಮಟ್ಟದಲ್ಲಿ ಸಾಮಾನ್ಯ ಕೋರಿಕೆ, ಪರಸ್ಪರ ವರ್ಗಾವಣೆ ಕೌನ್ಸೆಲಿಂಗ್‌ ಪ್ರಕ್ರಿಯೆಯನ್ನು ಮುಂದುವರಿಸುವಂತೆ ತಿಳಿಸಲಾಗಿದೆ. ಸದ್ಯ ಆರಂಭದಲ್ಲಿ ಈಗಾಗಲೇ ವರ್ಗಾವಣೆ ಪ್ರಕ್ರಿಯೆ ಮುಗಿಸಿರುವ ಶಿಕ್ಷಕರಿಗೆ ಕೌನ್ಸೆಲಿಂಗ್‌ ನಡೆಸಲಾಗುತ್ತದೆ. ಹೊಸದಾಗಿ ಅರ್ಜಿ ಸಲ್ಲಿಸಿರುವ ಶಿಕ್ಷಕರಿಗೆ 2022ರ ಜ.19ರಿಂದ ಪ್ರಕ್ರಿಯೆ ಆರಂಭಗೊಳ್ಳಲಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next