Advertisement
ಶುಕ್ರವಾರ ಸರಕಾರಿ ಮತ್ತು ಖಾಸಗಿ ವಲಯದ ಎಲ್ಲ ವಿಶ್ವವಿದ್ಯಾಲಯಗಳ ಕುಲಪತಿಗಳು, ಉನ್ನತ ಶಿಕ್ಷಣ ಸೇರಿದಂತೆ ಹಲವು ಇಲಾಖೆಗಳ ಅಧಿಕಾರಿಗಳ ಜತೆ ವಿಡಿಯೋ ಸಂವಾದ ನಡೆಸಿದ ಅವರು, ಈ ಸಂಬಂಧ ಶೀಘ್ರದಲ್ಲೆ ದಿನಾಂಕ ಪ್ರಕಟಿಸಲಾಗುವುದು ಎಂದು ತಿಳಿಸಿದರು.
Related Articles
Advertisement
ಈಗಾಗಲೇ ಅಂತಿಮ ವರ್ಷದ ವಿದ್ಯಾರ್ಥಿಗಳ ನೇರ ತರಗತಿಗಳು ಯಶಸ್ವಿಯಾಗಿ ನಡೆಯುತ್ತಿವೆ. ಆ ಯಶಸ್ಸಿನ ಹಿನ್ನೆಲೆಯಲ್ಲಿ ಉಳಿದ ತರಗತಿಗಳನ್ನು ಆರಂಭಿಸಲಾಗುವುದು. ಯುಜಿಸಿ ಮತ್ತು ಕೋವಿಡ್ ಮಾರ್ಗಸೂಚಿ ಪ್ರಕಾರ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಶೈಕ್ಷಣಿಕ ವೇಳಾ ಪಟ್ಟಿ ಕುರಿತಂತೆ ಚರ್ಚೆ:ಸಭೆಯಲ್ಲಿ ಹಲವು ವಿಚಾರಗಳು ಕುರಿತಂತೆ ಚರ್ಚೆ ನಡೆಯಿತು. ಮುಖ್ಯವಾಗಿ 2021-22ರ ಶೈಕ್ಷಣಿಕ ವರ್ಷವನ್ನು ಯಾವಾಗಿನಿಂದ ಆರಂಭಿಸಬೇಕು ಎಂಬ ಬಗ್ಗೆ ಸಮಾಲೋಚನೆ ನಡೆಸಲಾಯಿತು. ಮೇ ತಿಂಗಳ ಎರಡನೇ ವಾರದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷೆಯನ್ನು ಈಗಾಗಲೇ ಘೋಷಣೆ ಮಾಡಲಾಗಿದೆ. ಇದನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಉನ್ನತ ಶಿಕ್ಷಣದ ಶೈಕ್ಷಣಿಕ ವೇಳಾಪಟ್ಟಿಯನ್ನು ರೂಪಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಅಶ್ವತ್ಥನಾರಾಯಣ ತಿಳಿಸಿದರು. ಆನ್‌ಲೈನ್ ಪರೀಕ್ಷೆಗಳಿಗಿಂತ ಪೆನ್ ಮತ್ತು ಪೇಪರ್ ಆಧಾರಿತ ಆಫ್‌ಲೈನ್ ಪರೀಕ್ಷೆಯೇ ಉತ್ತಮ ಎಂದು ವಿಟಿಸಿಯು ಕುಲಪತಿ ಪ್ರೊ.ಕರಿಸಿದ್ದಪ್ಪ ಸೇರಿದಂತೆ ಎಲ್ಲ ಕುಲಪತಿ, ಕುಲ ಸಚಿವರು ಸಲಹೆ ಮಾಡಿದರು. ಇದನ್ನು ಸರಕಾರ ಗಂಭೀರವಾಗಿ ಪರಿಶೀಲಿಸಲಿದೆ. ಯುಜಿಸಿ ನಿಯಮದಂತೆ ಮಾರ್ಚ್‌ನಲ್ಲಿ ಪರೀಕ್ಷೆ ಮುಗಿಯಬೇಕಾಗುತ್ತದೆ. ಆದರೆ, ಇನ್ನು ಹಲವಾರು ವಿವಿಗಳ ವ್ಯಾಪ್ತಿಯಲ್ಲಿ ಪಾಠಗಳು ಮುಗಿಯದ ಕಾರಣ ಏಪ್ರಿಲ್ ಅಥವಾ ಮೇ ತಿಂಗಳಲ್ಲಿ ಪರೀಕ್ಷೆ ನಡೆಸುವ ಬಗ್ಗೆ ಚಿಂತಿಸಲಾಗುತ್ತಿದೆ. ಶೀಘ್ರವೇ ಈ ಬಗ್ಗೆ ಅಂತಿಮ ಮಾಹಿತಿ ನೀಡಲಾಗುವುದು ಎಂದು ಹೇಳಿದರು. ಬಸ್ ಪಾಸ್ ಮತ್ತು ಹಾಸ್ಟೆಲ್ ಸೌಲಭ್ಯ
ಕೆಲವು ಕಡೆಗಳಲ್ಲಿ ವಿದ್ಯಾರ್ಥಿಗಳ ಬಸ್ ಪಾಸ್ ಬಗ್ಗೆ ಗೊಂದಲಗಳು ಕೇಳಿಬಂದಿವೆ. ಈ ಬಗ್ಗೆ ಶೀಘ್ರದಲ್ಲೆ ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರ ಜತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು. ಪಾಸ್ ಇಟ್ಟುಕೊಂಡೇ ಓಡಾಡಬಹುದಾ? ಇಲ್ಲವಾ? ಎಂಬ ಬಗ್ಗೆ ಮಾಹಿತಿ ನೀಡಲಾಗುವುದು ಅಶ್ವತ್ಥನಾರಾಯಣ ಸ್ಪಷ್ಟಪಡಿಸಿದರು. ತರಗತಿಗಳು ಆರಂಭವಾದ ಮೇಲೆ ಪರಿಶಿಷ್ಟ ಜಾತಿ ಮತ್ತು ವರ್ಗದ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯ ಒದಗಿಸಲಾಗುವುದು. ಈ ಬಗ್ಗೆ ಸಮಾಜ ಕಲ್ಯಾಣ ಇಲಾಖೆ ಸಕಾರಾತ್ಮಕವಾಗಿ ಸ್ಪಂದಿಸಿದೆ ಎಂದು ಹೇಳಿದರು. ಆನ್‌ಲೈನ್ ಸಭೆಯಲ್ಲಿ ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕುಮಾರ್ ನಾಯಕ್, ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತ ಪ್ರದೀಪ್, ಉನ್ನತ ಶಿಕ್ಷಣ ಪರಿಷತ್ ಉಪಾಧ್ಯಕ್ಷ ಪ್ರೊ.ತಿಮ್ಮೇಗೌಡ ಸೇರಿದಂತೆ ರಾಜ್ಯದ ಎಲ್ಲ ವಿವಿಗಳ ಕುಲಪತಿ, ಕುಲ ಸಚಿವರು ಪಾಲ್ಗೊಂಡಿದ್ದರು.ರಾಮನಗರ ಪ್ರವಾಸದಲ್ಲಿರುವ ಅಶ್ವತ್ಥನಾರಾಯಣ ಅವರು ಅಲ್ಲಿಯಿಂದಲೇ ವಿಡಿಯೊ ಸಂವಾದ ನಡೆಸಿದರು.