Advertisement

Modi ವಿರುದ್ಧ ಆಕ್ಷೇಪಾರ್ಹ ವಿಡಿಯೊ: ಬಂಧನ

10:05 PM Apr 22, 2023 | Team Udayavani |

ಲಕ್ನೋ: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ವಿಡಿಯೊ ಒಂದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಕ್ಕಾಗಿ ಉತ್ತರಪ್ರದೇಶದ ಬಲ್ಲಿಯಾ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಉಸ್ಸಾ ಗ್ರಾಮದ ನಿವಾಸಿಯಾಗಿರುವ ಅಜಿತ್‌ ಕುಮಾರ್‌ ಯಾದವ್‌ ಫೇಸ್‌ಬುಕ್‌ನಲ್ಲಿ ಪ್ರಧಾನಿ ಅವರನ್ನು ನಿಂದಿಸುವ ಆಕ್ಷೇಪಾರ್ಹ ವಿಡಿಯೊವನ್ನು ಶುಕ್ರವಾರ ಅಪ್ಲೋಡ್‌ ಮಾಡಿದ್ದ. ಈ ಹಿನ್ನೆಲೆಯಲ್ಲಲ್ಲಿ ಆತನ ವಿರುದ್ಧ ಮಾಹಿತಿ ಮತ್ತು ತಂತ್ರಜ್ಞಾನ ಕಾಯ್ದೆ ಹಾಗೂ ಐಪಿಸಿ ಸೆಕ್ಷನ್‌ಗಳ ಅನ್ವಯ ದೂರು ದಾಖಲಿಸಿ, ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next