Advertisement

ಸಾಲ ಪಾವತಿಗೆ ಮಲ್ಯ ಭಾರೀ ಮೊತ್ತದ ಆಫ‌ರ್‌

08:35 AM Jul 18, 2020 | mahesh |

ಹೊಸದಿಲ್ಲಿ: ಬ್ರಿಟನ್‌ನಿಂದ ಭಾರತಕ್ಕೆ ಗಡಿಪಾರಿನ ಅಂಚಿನಲ್ಲಿರುವ ಉದ್ಯಮಿ ವಿಜಯ ಮಲ್ಯ ಭಾರಿ ಮೊತ್ತದ ಸಾಲ ಮರು ಪಾವತಿ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ಮುಖ್ಯ ನ್ಯಾಯಮೂರ್ತಿ ಎಸ್‌.ಎ.ಬೋಬ್ಡೆ ನೇತೃತ್ವದ ನ್ಯಾಯ ಪೀಠದ ಮುಂದೆ ವಕೀಲರ ಮೂಲಕ ಅಂಶ ಅರಿಕೆ ಮಾಡಿದ್ದಾರೆ. ಒಂದು ವೇಳೆ ಅದು ಸ್ವೀಕೃತಗೊಂಡರೆ ಜಾರಿ ನಿರ್ದೇಶ ನಾಲಯ ತಮ್ಮ ವಿರುದ್ಧ ದಾಖಲಿಸಿರುವ ಕೇಸುಗಳನ್ನು ಇತ್ಯರ್ಥ ಮಾಡಬೇಕೆಂದು ಕೋರಿಕೆ ಸಲ್ಲಿಸಿದ್ದಾರೆ.

Advertisement

ಗುರುವಾರ ನಡೆದ ವಿಚಾರಣೆ ವೇಳೆ ಮಲ್ಯ ಪರ ವಕೀಲರು ಮೊತ್ತದ ಅಂಶವನ್ನು ಪ್ರಸ್ತಾಪ ಮಾಡಿಲ್ಲ. ಆದರೆ ಸುಪ್ರೀಂಕೋರ್ಟ್‌ಗೆ ಜೂನ್‌ನಲ್ಲಿ ಸಲ್ಲಿಕೆ ಮಾಡಿರುವ ಅರ್ಜಿಯಲ್ಲಿ 13,960 ಕೋಟಿ ರೂ. ಮೊತ್ತ ನೀಡುವುದಾಗಿ ಹೇಳಿದ್ದಾರೆ. ಎಸ್‌ಬಿಐ ನೇತೃತ್ವದ ಬ್ಯಾಂಕ್‌ಗಳ ಒಕ್ಕೂಟಕ್ಕೆ ಅವರು 9 ಸಾವಿರ ಕೋಟಿ ರೂ. ಪಾವತಿ ಮಾಡಬೇಕಾಗಿದೆ ಎಂದು ಮೂಲಗಳನ್ನು ಉಲ್ಲೇಖೀಸಿ “ದ ಟೈಮ್ಸ್‌ ಆಫ್ ಇಂಡಿಯಾ’ ವರದಿ ಮಾಡಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ “ಮಲ್ಯ ಭಾರತಕ್ಕೆ ಬರುವ ಮೊದಲು ಅವರು ನೀಡಲು ಉದ್ದೇಶಿಸಿರುವ ಮೊತ್ತವನ್ನು ಠೇವಣಿಯಾಗಿ ಇರಿಸಲಿ. ಅವರು ಆಗಾಗ ಇಂಥ ಕೊಡುಗೆಗಳನ್ನು ನೀಡುತ್ತಾ ಇರುತ್ತಾರೆ’ ಎಂದು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next