ಮೂಡಿಗೆರೆ : ಚಾರ್ಮಾಡಿ ಘಾಟ್ ನಲ್ಲಿ ಹೆದ್ದಾರಿ ಬದಿಯ ತಡೆಗೋಡೆ ಕಾಮಗಾರಿಗಳು ನಡೆಯುತ್ತಿದ್ದು ಲೋಕೋಪಯೋಗಿ ಇಲಾಖೆ ರಾಜ್ಯ ಕಾರ್ಯದರ್ಶಿ ಕೃಷ್ಣ ರೆಡ್ಡಿ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ತಂಡ ಭೇಟಿ ನೀಡಿ ಕಾಮಗಾರಿಯನ್ನು ಪರಿಶೀಲಿಸಿದರು.
ಚಿಕ್ಕಮಗಳೂರು ಜಿಲ್ಲೆಯ ಚಾರ್ಮಾಡಿ ಘಾಟ್ ನಲ್ಲಿ ಎರಡು ವರ್ಷಗಳ ಹಿಂದೆ ಭೂಕುಸಿತ ಸಂಭವಿಸಿದ್ದು ಹಾಗೂ ಮಳೆ ಗಾಳಿಗೆ ರಸ್ತೆ ಹಾಗೂ ತಡೆಗೋಡೆಗಳು ಸಂಪೂರ್ಣ ಹಾನಿಯಾಗಿತ್ತು. ಈಗಾಲೇ ರಸ್ತೆಯ ಕೆಲಸ ತಾತ್ಕಾಲಿಕವಾಗಿ ಮುಗಿದಿದ್ದು, ರಸ್ತೆ ಎರಡು ಬದಿಗಳಲ್ಲಿ ತಡೆಗೋಡೆಗಳು ಕಾಮಗಾರಿ ನಡೆಯುತ್ತಿದೆ.
ಕಾಮಗಾರಿಯನ್ನು ವೀಕ್ಷಿಸಿದ ಅಧಿಕಾರಿಗಳು ಚಾರ್ಮಾಡಿ ಘಾಟ್ ಕಾಮಗಾರಿಯನ್ನು ಆದಷ್ಟು ಬೇಗ ಮುಗಿಸುವಂತೆ ಹಾಗೂ ಮಳೆಗಾಲದಲ್ಲಿ ಯಾವುದೇ ತೊಂದರೆಯಾಗದಂತೆ ಕೆಲಸ ಕಾರ್ಯ ನಿರ್ವಹಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಹಾಸನ ವಿಭಾಗ ಕಾರ್ಯ ನಿರ್ವಾಹಕ ಇಂಜಿನಿಯರ್ ಅರ್ಚನಾ, ಬೇಲೂರು NHAEE ಇಂಜಿನಿಯರ್ ಮುನಿರಾಜ್, ಹಾಗೂ ಸಹಾಯಕ ಇಂಜಿನಿಯರ್ ಸಂತೋಷ್ ಮುಂತಾದವರು ಇದ್ದರು.
ಇದನ್ನೂ ಓದಿ : ಮತ್ತೆ ವಿದ್ಯುತ್ ದರ ಏರಿಕೆ ಪ್ರಸ್ತಾಪ: ಸರಕಾರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಕಿಡಿ