Advertisement
ಕೋವಿಡ್ ಮುಂಜಾಗ್ರತೆಯ ದೃಷ್ಟಿಯಿಂದ ರಾಜ್ಯ ಸರಕಾರ ದೀಪಾವಳಿ ಹಬ್ಬದ ಆಚರಣೆಗೆ ಅಡ್ಡಿಯಾಗಬಾರದೆಂದು ಹಸಿರು ಪಟಾಕಿ ಮಾರಾಟಕ್ಕೆ ಅನುವು ಮಾಡಿಕೊಟ್ಟ ಹಿನ್ನೆಲೆಯಲ್ಲಿ ಕೆಲವೊಂದು ಕಡೆ ಪಟಾಕಿ ಸ್ಟಾಲ್ ಗಳಲ್ಲಿ ಹಸಿರು ಪಟಾಕಿ ಅಲ್ಲದ ಅನಧಿಕೃತ ಪಟಾಕಿಗಳನ್ನು ಮಾರಾಟ ಮಾಡುವ ದೃಷ್ಟಿಯಿಂದ ಜಿಲ್ಲಾಧಿಕಾರಿಗಳು ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳಿಗೆ ಸ್ಟಾಲ್ ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲು ಸೂಚನೆ ನೀಡಿದ್ದರು ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇರುವ ಪಟಾಕಿ ಸ್ಟಾಲ್ ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸರಕಾರ ಮಾರ್ಗದರ್ಶನದಂತೆ ಕೇವಲ ಹಸಿರು ಪಟಾಕಿಗಳನ್ನು ಮಾತ್ರ ಮಾರಾಟಕ್ಕೆ ಇಡಬೇಕೆಂದು ಸೂಚನೆ ನೀಡಲಾಗಿತ್ತು ಅದರಂತೆ ತಪಾಸಣೆ ನಡೆಸುವಂತೆ ಸರಕಾರದಿಂದ ಆಯಾಯ ಜಿಲ್ಲಾಧಿಕಾರಿಗಳಿಗೆ ಸೂಚನೆಯನ್ನು ನೀಡಲಾಗಿತ್ತು.