Advertisement
ನಿರೀಕ್ಷಿತ ಗುರಿ ಸಾಧಿಸಿಲ್ಲ: ಕೇಂದ್ರದಿಂದ ಹಣ ಬಿಡುಗಡೆಯಾಗಿದ್ದರೂ ಕೆಲವು ಇಲಾಖೆ ಗಳು ನಿರೀಕ್ಷಿತ ಗುರಿ ಸಾಧಿಸಿಲ್ಲ. ಕೇಂದ್ರದಿಂದ ಅನುದಾನ ಮಂಜೂರಾಗಿದ್ದರೂ ರಾಜ್ಯ ಸರ್ಕಾರದ ಇಲಾಖೆಗಳೇ ಅನುಷ್ಠಾನಕ್ಕೆ ತರಬೇಕಾಗಿರುವುದರಿಂದ ಇಲಾಖಾಧಿಕಾರಿಗಳು ವಿಶೇಷ ಆಸಕ್ತಿವಹಿಸಿ ಪ್ರಗತಿ ಸಾಧಿಸಬೇಕು, ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಎಲ್ಲಾ ಇಲಾಖೆಗಳು ತಾವು ಅನುಷ್ಠಾನ ಮಾಡುವ ಯೋಜನೆಗಳ ಮಾಹಿತಿಯನ್ನು ಕಡ್ಡಾಯವಾಗಿ ಭೌಗೋಳಿಕ ಮಾಹಿತಿ ವ್ಯವಸ್ಥೆ ಪೋರ್ಟಲ್‌ಗೆ ಅಪ್‌ಲೋಡ್ ಮಾಡಬೇ ಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
Related Articles
Advertisement
ರೈತರಿಗೆ ವಿಮಾ ಸೌಲಭ್ಯ: ಕೃಷಿ ಜಂಟಿ ನಿರ್ದೇಶಕಿ ರಾಜ ಸುಲೋಚನಾ ಮಾತನಾಡಿ, ಜಿಲ್ಲೆಯಲ್ಲಿ ಈಗಾಗಲೇ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ರೈತರ ನೋಂದಣಿಗಾಗಿ ಅಧಿಸೂಚನೆ ಹೊರಡಿಸಲಾಗಿದ್ದು, ಕಳೆದ 2019-20ನೇ ಸಾಲಿನಲ್ಲಿ 40,181 ರೈತರಿಗೆ ಒಟ್ಟಾರೆ 42.36 ಕೋಟಿ ರೂ.ಗಳ ವಿಮಾ ಸೌಲಭ್ಯ ಒದಗಿಸಲಾಗಿದೆ ಎಂದು ತಿಳಿಸಿದರು.
ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್ ಮಾತನಾಡಿ, ಮೊಬೈಲ್ ಮಣ್ಣು ಪರೀಕ್ಷಾ ಪ್ರಯೋಗಾಲಯವನ್ನು ಒದಗಿಸುವ ಪ್ರಸ್ತಾವನೆ ಯನ್ನು ಸರ್ಕಾರಕ್ಕೆ ಸಲ್ಲಿಸಬೇಕೆಂದು ಸಲಹೆ ನೀಡಿದರು. ಮೊಬೈಲ್ ಮಣ್ಣು ಪರೀಕ್ಷಾ ಪ್ರಯೋಗಾಲಯದಿಂದ ರೈತರ ಜಮೀನಿಗೆ ಭೇಟಿ ನೀಡಿ ಸ್ಥಳದಲ್ಲಿಯೇ ಮಣ್ಣು ಪರೀಕ್ಷೆ ಮಾಡಬಹುದಾಗಿದೆ ಎಂದು ತಿಳಿಸಿದರು. ಡಾ.ಕೇಶವರಾಜ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಂಸಿಕೃಷ್ಣ, ಜಿಪಂ ಅಧ್ಯಕ್ಷೆ ಲತಾ, ಮೇಯರ್ ಫರೀದಾ ಬೇಗಂ ಇದ್ದರು.
ಕೇಂದ್ರದ ಅಟಲ್ ಭೂಜಲ್ ಯೋಜನೆಗೆ ಜಿಲ್ಲೆಯ 6 ತಾಲೂಕುಗಳು ಆಯ್ಕೆಯಾಗಿದ್ದು, ಉಳಿದ 4 ತಾಲೂಕುಗಳಲ್ಲಿ ಜಲಾಮೃತ ಯೋಜನೆಯನ್ನು ಅನುಷ್ಠಾನಗೊಳಿಸ ಬೇಕು. ಈ ಯೋಜನೆಗಳ ಅನುಷ್ಠಾನ ಕ್ಕಾಗಿ ನೋಡಲ್ ಏಜೆನ್ಸಿಯಾಗಿ ಸಣ್ಣ ನೀರಾವರಿ ಇಲಾಖೆಯನ್ನು ನೇಮಕ ಮಾಡಲಾಗಿದೆ. -ಜಿ.ಎಸ್.ಬಸವರಾಜ್, ಸಂಸದ