Advertisement
ಬಿಹಾರದ ಪೂರ್ಣಿಯಾ ಜಿಲ್ಲೆಯಲ್ಲಿ ಘಟನೆ ನಡೆದಿದ್ದು, ಯುವಕನು ತಾನು ಉಗುಳಿ ಅಶುದ್ಧಗೊಳಿಸಿದ ಗೋಡೆಯನ್ನು ಶುಚಿಗೊಳಿಸುತ್ತಿರುವುದನ್ನು ವಿಡಿಯೋ ಮಾಡಲಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗಿದೆ. ಈ ವಿಡಿಯೋ ಇದೀಗ ಎಲ್ಲೆಡೆ ಭಾರಿ ವೈರಲ್ ಆಗಿದೆ.
Related Articles
Advertisement
ಈ ವಿಚಾರದ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಅಧಿಕಾರಿ ಸತ್ಯೇಂದ್ರ ಸಿಂಗ್ ನಾನು ತಂಬಾಕನ್ನು ತಿಂದು ಗೋಡೆಯ ಮೇಲೆ ಉಗುಳಿರುವ ವ್ಯಕ್ತಿಯನ್ನು ಹಿಡಿದಿದ್ದು, ಆತನಲ್ಲಿಯೇ ಗೋಡೆಯನ್ನು ಶುಚಿಗೊಳಿಸಿದ್ದೇನೆ. ಕೋವಿಡ್ ಸೋಂಕಿನ ಹೆಚ್ಚಳದ ಹಿನ್ನೆಲೆಯಲ್ಲಿ ಸಮಾಜಕ್ಕೆ ಶುಚಿತ್ವದ ಸಂದೇಶವನ್ನು ಸಾರುವ ಉದ್ದೇಶದಿಂದ ನಾನು ಹೀಗೆ ಮಾಡಿದ್ದೇನೆ ಎಂದಿದ್ದಾರೆ.
ನಾನು ಆ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿಲ್ಲ ಮತ್ತು ಯಾವುದೇ ವಿಡಿಯೋವನ್ನು ಚಿತ್ರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿಲ್ಲ. ಘಟನೆ ನಡೆಯುವ ಸಮಯದಲ್ಲಿ ನಮ್ಮ ಸುತ್ತ ಮುತ್ತಲೂ ಹಲವಾರು ಜನರಿದ್ದು, ಅವರಲ್ಲಿ ಯಾರಾದರೂ ವಿಡಿಯೋ ಮಾಡಿರಬಹುದು ಎಂದು ತಿಳಿಸಿದ್ದಾರೆ. ಈ ನಡುವೆ ವಿದ್ಯಾರ್ಥಿ ಜಿಲ್ಲಾ ಅಧಿಕಾರಿಗಳ ಬಳಿ ಘಟನೆಯ ಹಿನ್ನೆಲೆಯಲ್ಲಿ ದೂರು ದಾಖಲಿಸಿದ್ದಾನೆ ಎಂದು ವರದಿ ತಿಳಿಸಿದೆ.