Advertisement

Tollywood: ದಸರಾ ತಂಡದ ಜತೆ ನಾನಿ

12:52 PM Apr 02, 2024 | Team Udayavani |

ನಟ ನಾನಿ ಮತ್ತೂಮ್ಮೆ “ದಸರಾ’ ತಂಡದ ಜೊತೆ ಕೈ ಜೋಡಿಸಿದ್ದಾರೆ. ನಾನಿ ಅಭಿನಯಿಸ್ತಿರುವ 33ನೇ ಸಿನಿಮಾ ಘೋಷಣೆಯಾಗಿದ್ದು, ದಸರಾ ನಿರ್ದೇಶನ ಮಾಡಿದ್ದ ಶ್ರೀಕಾಂತ್‌ ಒಡೆಲಾ, ನಿರ್ಮಾಪಕ ಸುಧಾಕರ್‌ ಚೆರುಕುರಿ ಹಾಗೂ ನಾನಿ ಎರಡನೇ ಬಾರಿಗೆ ಒಂದಾಗಿದ್ದಾರೆ. ಹೊಸ ಚಿತ್ರದ ಫ‌ಸ್ಟ್‌ಲುಕ್‌ ಬಿಡುಗಡೆಯಾಗಿದೆ.

Advertisement

ಸಖತ್‌ ರಗಡ್‌ ಲುಕ್‌ ನಲ್ಲಿ ನಾನಿ ಕಾಣಿಸಿಕೊಂಡಿದ್ದಾರೆ. ಕೆಂಪು ಬಣ್ಣದ ಪೋಸ್ಟರ್‌ ನಲ್ಲಿ ಸಾಕಷ್ಟು ಸಂಖ್ಯೆಯ ಜನರನ್ನು ಕೂಡ ತೋರಿಸಲಾಗಿದೆ. “ಕ್ರಾಂತಿಯು ಪ್ರಾರಂಭವಾಗುವ ಮೊದಲು ಹಿಂಸಾಚಾರವು ಅದರ ಸರಿಯಾದ ರೂಪವನ್ನು ಪಡೆಯುತ್ತದೆ’ ಎಂದು ಶ್ರೀಕಾಂತ್‌ ತಮ್ಮ ಹೊಸ ಪ್ರಾಜೆಕ್ಟ್ ಬಗ್ಗೆ ತಿಳಿಸಿದ್ದಾರೆ. ನಾನಿ ಈ ಚಿತ್ರದಲ್ಲಿ ಹಿಂದೆಂದೂ ಕಾಣದ ಅವತಾರ­ದಲ್ಲಿ ಕಾಣಿಸಿಕೊಳ್ಳಲಿದ್ದಾರಂತೆ. 2025ಕ್ಕೆ ಸಿನಿಮಾ ತೆರೆಗೆ ತರಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.

Advertisement

Udayavani is now on Telegram. Click here to join our channel and stay updated with the latest news.

Next