Advertisement
ಪ್ರಧಾನಿ ನರೇಂದ್ರ ಮೋದಿ ಯವರ ಪೋಷಣ್ ಮಾಸಾಚರಣೆಯ ಘೋಷಣೆಯ ಬೆನ್ನಲ್ಲೇ ಈ ಅಧಿಕೃತ ಆದೇಶ ಹೊರಟಿರುವುದು ಬಹಳ ಸಂತಸದ ವಿಷಯವಾಗಿದೆ. ಕರ್ನಾಟಕ ಅಂಗನವಾಡಿ ಮತ್ತು ಪೋಷನ್ ಅಭಿಯಾನ 2.0 ಎಂದು ಮರುನಾಮಾಂಕಿತಗೊಂಡಿರುವ ಸಮಗ್ರ ಮಕ್ಕಳ ಅಭಿವೃದ್ದಿ ಯೋಜನೆಯನ್ನು 1975 ರಲ್ಲಿ ಪ್ರಾರಂಭಿಸಲಾಗಿತ್ತು. ಪ್ರಸ್ತುತ ರಾಜ್ಯದಲ್ಲಿ ಈ ಯೋಜನೆಯ ಅಡಿಯಲ್ಲಿ ಒಟ್ಟು 66,361 ಅಂಗನವಾಡಿ ಕೇಂದ್ರಗಳು ಸ್ಥಾಪಿತವಾಗಿದ್ದು, ಅವುಗಳ ಮೂಲಕ ರಾಜ್ಯದ ಮಕ್ಕಳಿಗೆ, ಕಿಶೋರಿಯರಿಗೆ, ಗರ್ಭಿಣಿ ಸ್ತ್ರೀಯರಿಗೆ ಹಾಗೂ ಬಾಣಂತಿಯರಿಗೆ ಪೂರಕ ಪೌಷ್ಟಿಕ ಆಹಾರ, ಶಾಲಾ ಪೂರ್ವ ಶಿಕ್ಷಣ, ಪೌಷ್ಟಿಕತೆ ಮತ್ತು ಆರೋಗ್ಯ ಶಿಕ್ಷಣ ಮುಂತಾದ 6 ಸೇವೆಗಳನ್ನು ಒದಗಿಸಲಾಗುತ್ತಿದೆ. ಪ್ರಸ್ತುತ ಈ ಯೋಜನೆಯ ಅಡಿ ಶೇಕಡಾ 56 ರಷ್ಟು ಫಲಾನುಭವಿಗಳಿಗೆ ಮಾತ್ರ ಸೌಲಭ್ಯ ನೀಡಲು ಸಾಧ್ಯವಾಗಿದೆ. ಈ ಯೋಜನೆಯಿಂದ ಹೊರಗಿರುವ ಕಡಿಮೆ ಆದಾಯದ ಜನಸಂಖ್ಯೆಯು ವಾಸಿಸುವ ಪ್ರದೇಶಗಳು ಹೆಚ್ಚಾಗಿದ್ದು, ಅವರಿಗೆ 6 ಸೇವೆಗಳನ್ನು ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಮಹತ್ವದ ನಿರ್ಧಾರ ತಗೆದುಕೊಂಡಿದೆ ಎಂದು ಹೇಳಿದ್ದಾರೆ.
Advertisement
4244 ಅಂಗನವಾಡಿ ಕೇಂದ್ರಗಳ ಪ್ರಾರಂಭಕ್ಕೆ ಅಧಿಕೃತ ಆದೇಶ: ಸಚಿವ ಹಾಲಪ್ಪ ಆಚಾರ್
05:04 PM Sep 03, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.