Advertisement
ಆದರೆ, ಹೊಸದಾಗಿ ರಚನೆಯಾಗಿರುವ ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯ ಹಾಗೂ ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಆಡಳಿತಾತ್ಮಕ ಕಾರ್ಯಗಳು ಜುಲೈ 1ರಿಂದಲೇ ಆರಂಭಿಸಲು ಸರ್ಕಾರ ನಿರ್ದೇಶಿಸಿದೆ. ಬೆಂಗಳೂರು ವಿಶ್ವವಿದ್ಯಾಲಯದ ಆಡಳಿತ ಕಚೇರಿ ಜ್ಞಾನಭಾರತಿಯಲ್ಲೇ ಇರಲಿದೆ.
Related Articles
Advertisement
ಸಿಬ್ಬಂದಿ ನಿಯೋಜನೆಯಾಗಿಲ್ಲಸದ್ಯ ಬೆಂಗಳೂರು ವಿವಿ ವ್ಯಾಪ್ತಿಯಲ್ಲಿ 684 ಕಾಲೇಜು ಇದ್ದು, ಪ್ರಸಕ್ತ ಸಾಲಿನಲ್ಲಿ ಸುಮಾರು 50 ಹೊಸ ಕಾಲೇಜು ಆರಂಭವಾಗುವ ಸಾಧ್ಯತೆ ಇದೆ. ಬೆಂಗಳೂರು ಉತ್ತರ ವಿವಿ ಹಾಗೂ ಕೇಂದ್ರ ವಿಶ್ವವಿದ್ಯಾಯದ ಆಡಳಿತ ಇತ್ಯಾದಿ ಗಮನಿಸಲು ಇಬ್ಬರು ಆಡಳಿತಾಧಿಕಾರಿಗಳನ್ನು ಸರ್ಕಾರ ಈಗಾಗಲೇ ನೇಮಿಸಿದೆ. ಹೊಸ ವಿಶ್ವವಿದ್ಯಾಲಯದ ಆಡಳಿತ ಕಚೇರಿಯ ಕಟ್ಟಡ, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದ ನಿಯೋಜನೆ ಇನ್ನೂ ಆಗಿಲ್ಲ. ಉನ್ನತ ಶಿಕ್ಷಣ ಪರಿಷತ್ತು ಸದಸ್ಯರ ಸಭೆ
ಈ ಶೈಕ್ಷಣಿಕ ವರ್ಷದಿಂದಲೇ ಬೆಂಗಳೂರು ವಿಶ್ವವಿದ್ಯಾಯದ ವಿಭಜನೆಯಾಗಿ ಎರಡು ಹೊಸ ವಿಶ್ವವಿದ್ಯಾಲಯ ಹುಟ್ಟಿಕೊಂಡರೂ, ಶೈಕ್ಷಣಿಕ ಚಟುವಟಿಕೆ, ಪ್ರವೇಶಾತಿ ಹಾಗೂ ಪರೀಕ್ಷೆ ಇತ್ಯಾದಿ ಬೆಂವಿವಿ ಮೂಲಕವೇ ನಡೆಯಲಿ. ಆ ಎರಡು ಹೊಸ ವಿಶ್ವವಿದ್ಯಾಲಯದಲ್ಲಿ ಎಲ್ಲಾ ರೀತಿಯ ಸೌಕರ್ಯ ಹಾಗೂ ಪರೀಕ್ಷಾ ಕೇಂದ್ರ ವ್ಯವಸ್ಥೆಯ ನಂತರ ವರ್ಗಾವಣೆ ಮಾಡುವ ಬಗ್ಗೆ ಶನಿವಾರ ರಾಜ್ಯ ಉನ್ನತ ಶಿಕ್ಷಣ ಪರಿಷತ್‌ನಲ್ಲಿ ನಡೆದ ಸಭೆಯಲ್ಲಿ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗಿದೆ. ವಿವಿ ಅಕ್ರಮದ ತನಿಖೆಗೆ ಸಚಿವರಿಂದ ಆದೇಶ
ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ನಡೆದಿದೆ ಎನ್ನಲಾದ ಆರ್ಥಿಕ ಅವ್ಯವಹಾರ, ಗಂಭೀರ ಸ್ವರೂಪದ ಭ್ರಷ್ಟಾಚಾರ ಹಾಗೂ ಕಾನೂನು ಬಾಹಿರ ಕೃತ್ಯದ ಬಗ್ಗೆ ರಾಜ್ಯ ಶಿಕ್ಷಣ ವೇದಿಕೆ ಅಧ್ಯಕ್ಷ ಕೆ.ಗಂಗಾಧರ ಮೂರ್ತಿಯವರು ನೀಡಿರುವ ದೂರಿನಂತೆ ತನಿಖೆ ನಡೆಸಿ ವರದಿ ಒಪ್ಪಿಸುವಂತೆ ಉನ್ನತ ಶಿಕ್ಷಣ ಸಚಿವರು ಆದೇಶಿಸಿದ್ದಾರೆ. ಆರೋಪದ ಹಿನ್ನೆಲೆಯಲ್ಲಿ ಹಿಂದಿನ ಕುಲಪತಿ ಡಾ. ಬಿ. ತಿಮ್ಮೇಗೌಡ ವಿರುದ್ಧ ತನಿಖೆ ನಡೆಸಬೇಕು. ನಿಯಮ ಬಾಹಿರವಾಗಿ ಡಾ.ಎಂ.ನಾರಾಯಣಸ್ವಾಮಿಯವರಿಗೆ ಪ್ರಾಧ್ಯಾಪಕ ಹುದ್ದೆಗೆ ಮುಂಬಡ್ತಿ ನೀಡಿರುವುದು ಸೇರಿದಂತೆ ಕರ್ತವ್ಯ ಲೋಪ ಎಸಗಿರುವ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಉನ್ನತ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಲಾಗಿತ್ತು. ಈ ಬಗ್ಗೆ ಕೂಲಂಕಷವಾಗಿ ಪರಿಶೀಲಿಸಿ, ನಿಯಮಾನುಸಾರ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಬೆಂವಿವಿ ಕುಲಸಚಿವರಿಗೆ ಪತ್ರದಲ್ಲಿ ನಿರ್ದೇಶಿಸಲಾಗಿದೆ.