Advertisement

ಇಂದಿರಾಗಾಂಧಿ ವಸತಿ ಶಾಲೆಗೆ ಅಧಿಕಾರಿ ಭೇಟಿ

04:55 PM Aug 19, 2022 | Team Udayavani |

ವಾಡಿ: ಕಳಪೆ ಊಟ,ವಸತಿ ಸೌಲಭ್ಯದಿಂದ ಬೇಸತ್ತು ವಿದ್ಯಾರ್ಥಿಗಳು ಎಐಡಿಎಸ್‌ಒ ಸಂಘಟನೆ ನೇತೃತ್ವದಲ್ಲಿ ಹೋರಾಟಕ್ಕಿಳಿದ ಬಳಿಕ ಎಚ್ಚೆತ್ತಿರುವ ಸಮಾಜಕಲ್ಯಾಣ ಇಲಾಖೆ ಅಧಿಕಾರಿಗಳು ಇಂದಿರಾಗಾಂಧಿ ವಸತಿ ಶಾಲೆಗೆ ಭೇಟಿ ನೀಡಿ ಮಕ್ಕಳ ಸಮಸ್ಯೆ ಆಲಿಸಿದ್ದಾರೆ.

Advertisement

ವಿದ್ಯಾರ್ಥಿಗಳ ಪ್ರತಿಭಟನೆ ನಂತರ ಬುಧವಾರ ಸಂಜೆ ವಸತಿ ನಿಲಯಕ್ಕೆ ಹಠಾತ್‌ ಭೇಟಿ ನೀಡಿದ್ದ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಚೇತನ್‌ ಗುರಿಕಾರ, ಅಲ್ಲಿನ ಅವ್ಯವಸ್ಥೆ ಪರಿಶೀಲಿಸಿದ್ದರು. ಗುರುವಾರ ಬೆಳಗ್ಗೆ ನಿಲಯಕ್ಕೆ ಭೇಟಿ ನೀಡಿದ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಪಿ.ಶುಭಾ, ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆ ಪರೀಕ್ಷಿಸಿದರು. ಆನಂತರ ಅಡುಗೆ ಸಹಾಯಕರನ್ನು ತರಾಟೆಗೆ ತೆಗೆದುಕೊಂಡರು.

ಸೋಮವಾರವೆ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಿ ಕರದಾಳದ ನೂತನ ವಸತಿ ಶಾಲೆ ಕಟ್ಟಡಕ್ಕೆ ಕರೆದೋಯ್ಯಲಾಗುವುದು ಎಂದು ಭರವಸೆ ನೀಡಿದರು. ಚೇತನ್‌ ಗುರಿಕಾರ, ಗುರುಪಾದಪ್ಪ ನೀಲಗಿ, ನಿಲಯದ ಪ್ರಾಂಶುಪಾಲರು ಹಾಗೂ ಶಿಕ್ಷಕರು ಈ ಸಂದರ್ಭದಲ್ಲಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next